Tuesday, June 9, 2026
spot_imgspot_img
spot_imgspot_img

ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ  ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ವೈ ಸಂತಾಪ.

- Advertisement -
- Advertisement -

ಬೆಂಗಳೂರು: ಕೇಂದ್ರ ರೈಲ್ವೆ ರಾಜ್ಯ ಸಚಿವ ಸುರೇಶ್ ಅಂಗಡಿ  ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ  ಸಂತಾಪ ವ್ಯಕ್ತಪಡಿಸಿದ್ದಾರೆ.

ಸುರೇಶ್ ಅಂಗಡಿ ಅವರು ಒಬ್ಬ ಸಜ್ಜನ ರಾಜಕಾರಣಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸತತ ನಾಲ್ಕು ಬಾರಿ ಆಯ್ಕೆಯಾಗಿದ್ದ ಜನಪ್ರಿಯ ನಾಯಕರಾಗಿದ್ದರು. 2019ರಲ್ಲಿ ಭಾರತದ ರೈಲ್ವೆ ಖಾತೆಯ ರಾಜ್ಯ ಸಚಿವರಾಗಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ರಾಜ್ಯಕ್ಕೆ ಅನೇಕ ರೈಲ್ವೆ ಯೋಜನೆಗಳನ್ನು ತರುವಲ್ಲಿ ಇವರು ಪ್ರಮುಖ ಪಾತ್ರವನ್ನು ವಹಿಸಿದ್ದರು ಎಂದು ಸಿಎಂ ಬಿಎಸ್‍ವೈ ಸಂತಾಪ ಸೂಚಿಸಿದ್ದಾರೆ.

ಅವರ ನಿಧನದಿಂದ ಒಬ್ಬ ಆತ್ಮೀಯರೊಬ್ಬರನ್ನು ಕಳೆದುಕೊಂಡಂತಾಗಿದೆ. ಸುರೇಶ್ ಅಂಗಡಿಯವರ ಆತ್ಮಕ್ಕೆ ಶಾಂತಿ ದೊರಕಲಿ ಹಾಗೂ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ಕುಟುಂಬದವರಿಗೆ ಭಗವಂತ ಕರುಣಿಸಲಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಾರ್ಥಿಸಿದ್ದಾರೆ.

- Advertisement -

Related news

error: Content is protected !!