Monday, June 15, 2026
spot_imgspot_img
spot_imgspot_img

ನಾಳೆ ಸುರೇಶ್​​ ಅಂಗಡಿ ನಿವಾಸಕ್ಕೆ ಭೇಟಿ ನೀಡಲಿರುವ ಬಿ.ಎಸ್. ಯಡಿಯೂರಪ್ಪ

- Advertisement -
- Advertisement -

ಬೆಂಗಳೂರು: ಕೊರೊನಾದಿಂದ ನಿಧನರಾದ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿವಾಸಕ್ಕೆ ನಾಳೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ, ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಲಿದ್ದಾರೆ.

ನಾಳೆ ಬೆಳಗ್ಗೆ 8.30ಕ್ಕೆ ಹೆಚ್.ಎ. ಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸಲಿರುವ ಸಿಎಂ, ಬೆಳಗ್ಗೆ,9.45ಕ್ಕೆ ಬೆಳಗಾವಿಯ ಸಾಂಬ್ರಾ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ಸುರೇಶ್ ಅಂಗಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಲಿದ್ದಾರೆ.ನಂತರ ಬೆಳಗ್ಗೆ 11ಕ್ಕೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಹೊರಟು ಅಪರಾಹ್ನ 12.15ಕ್ಕೆ ಹೆಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ.

- Advertisement -

Related news

error: Content is protected !!