Tuesday, November 10, 2026
spot_imgspot_img
spot_imgspot_img

ದಿ.ಸುರೇಶ್ ಅಂಗಡಿ ಸ್ಮಾರಕ ನಿರ್ಮಾಣ: ಬಿ.ಎಸ್.ಯಡಿಯೂರಪ್ಪ ಭರವಸೆ

- Advertisement -
- Advertisement -

ಬೆಳಗಾವಿ : ದೆಹಲಿಯ ರುದ್ರಭೂಮಿಯ ಅಭಿವೃದ್ಧಿಯ ಜತೆಗೆ ಅಲ್ಲಿ ದಿ.ಸುರೇಶ್ ಅಂಗಡಿ ಅವರ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ಸಂಬಂಧಿಸಿದಂತೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಸುರೇಶ್ ಅಂಗಡಿ ಅವರ ಸಂಬಂಧಿಕರೂ ಆಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ್ ಶೆಟ್ಟರ್, ಬಾಕಿ ಉಳಿದಿದ್ದ ರೈಲ್ವೆ ಇಲಾಖೆಯ ಬಹುತೇಕ ಯೋಜನೆಗಳಿಗೆ ಅಂಗಡಿ ಅವರು ಚಾಲನೆ ನೀಡಿದ್ದರು ಎಂದು ನೆನಪಿಸಿಕೊಂಡರು.

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕರ್ನಾಟಕದ ವಿವಿಧ ರೈಲ್ವೆ ಯೋಜನೆಗಳನ್ನು ಪೂರ್ಣಗೊಳಿಸಲು ತೀವ್ರ ಆಸಕ್ತಿಯಿಂದ ಕೆಲಸ ಮಾಡುತ್ತಿದ್ದರು ಎಂದು ಹೇಳಿದರು.
ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಬಳಿಕ ಅಂಗಡಿ ಅವರು ಅತ್ಯಂತ ಚಟುವಟಿಕೆಯಿಂದ ಕೆಲಸ ಮಾಡುತ್ತಿದ್ದರು ಎಂದು ಸ್ಮರಿಸಿದರು.ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಕೂಡ ಸುರೇಶ್ ಅಂಗಡಿ ಅವರೊಂದಿಗಿನ ಒಡನಾಟ ಸ್ಮರಿಸಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ಪತ್ನಿ ಮಂಗಲಾ ಸುರೇಶ್ ಅಂಗಡಿ, ಮಕ್ಕಳಾದ ಶ್ರದ್ಧಾ ಹಾಗೂ ಸ್ಫೂರ್ತಿ ಮತ್ತಿತರರು ಉಪಸ್ಥಿತರಿದ್ದರು.
ಶಾಸಕ ಅನಿಲ್ ಬೆನಕೆ, ಮಾಜಿ ಶಾಸಕ ಸಂಜಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೇರಿದಂತೆ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

- Advertisement -

Related news

error: Content is protected !!