Friday, May 23, 2025
spot_imgspot_img
spot_imgspot_img

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ನೂತನ ಯೋಜನಾಧಿಕಾರಿಯಾಗಿ ಸುರೇಶ್ ಗೌಡ ಅಧಿಕಾರ ಸ್ವೀಕಾರ

- Advertisement -
- Advertisement -

ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ.) ವಿಟ್ಲದ ಯೋಜನಾ ಕಚೇರಿಯ ನೂತನ ಯೋಜನಾಧಿಕಾರಿಯಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ಯೋಜನಾ ಕಚೇರಿಯಿಂದ ವರ್ಗಾವಣೆಗೊಂಡ ಸುರೇಶ್ ಗೌಡ ಅಧಿಕಾರ ಸ್ವೀಕರಿಸಿದರು.

ಈ ಹಿಂದೆ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಧರ್ಮಸ್ಥಳ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರಕ್ಕೆ ವರ್ಗಾವಣೆಗೊಂಡ ಯೋಜನಾಧಿಕಾರಿ ರಮೇಶ್ ಅಧಿಕಾರ ಹಸ್ತಾಂತರ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ವಿಮಾ ಸಮನ್ವಯಧಿಕಾರಿ ಜನಾರ್ಧನ, ಮುಡಿಪು ವಲಯ ಮೇಲ್ವಿಚಾರಕಿ ಪ್ರೇಮಲತಾ, ತಾಲೂಕು ಜ್ಞಾನವಿಕಾಸ ಸಮನ್ವಯಾಧಿಕಾರಿ ದೀಪ , ಫಂಡ್ ಮ್ಯಾನೇಜರ್ ರತ್ನವತಿ, ಅಸಿಸ್ಟೆಂಟ್ ಮೆನೇಜರ್ ವಾಣಿ ಹಾಗೂ ಕಛೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!