Friday, April 26, 2024
spot_imgspot_img
spot_imgspot_img

ಶೀಘ್ರವೇ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ ಆರಂಭ: ಸಚಿವ-ಸುರೇಶ್ ಕುಮಾರ್*

- Advertisement -G L Acharya panikkar
- Advertisement -

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಪಿಡುಗಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 8, 9 ಮತ್ತು 10ನೇ ತರಗತಿಗಳಿಗಾಗಿ ‘ಸೇತುಬಂಧ’ (ಬ್ರಿಡ್ಜ್ ಕೋರ್ಸ್) ಕಾರ್ಯಕ್ರಮಗಳ ವಿಡಿಯೋ ತರಗತಿಗಳನ್ನು  ದೂರದರ್ಶನ ಚಂದನವಾಹಿನಿಯಲ್ಲಿ ಪ್ರಸಾರ ಮಾಡಲಾಗುತ್ತಿದ್ದು, ಈ ಸಂಬಂದ ಎಲ್ಲ ಅಗತ್ಯ ಪೂರ್ವ ಸಿದ್ಧತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಬುಧವಾರ ಇಲಾಖೆಯ ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ-ಡಿಎಸ್‍ಇಆರ್‍ಟಿಯಲ್ಲಿ ಸೇತುಬಂಧ ಕಾರ್ಯಕ್ರಮದ ರೂಪುರೇಷೆ ಮತ್ತು ಸಿದ್ಧತೆಗಳನ್ನು ಪರಿಶೀಲಿಸಿ,ದ ಸಚಿವರು, ಇಲಾಖೆ ಸಿದ್ಧಪಡಿಸಿದ ವಿಡಿಯೋ ತರಗತಿಗಳನ್ನು  ವೀಕ್ಷಿಸಿದರು.

ನಮ್ಮ ವಿದ್ಯಾರ್ಥಿಗಳ ಕಲಿಕೆಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ  ಕಲಿಕೆಯನ್ನು ನಿರಂತರವಾಗಿರಿಸಲು ಸಾರ್ವಜನಿಕ ಶಿಕ್ಷಣ ಇಂದಿನ ಸಂದರ್ಭಕ್ಕೆ ಪರಿಣಾಮಕಾರಿಯಾದ ಪರ್ಯಾಯ ಕ್ರಮಗಳಿಗೆ ಚಾಲನೆ ನೀಡಿದೆ ಎಂದು ಅವರು ಹೇಳಿದರು.

ಅದರಂತೆಯೇ ಶಿಕ್ಷಣ ಇಲಾಖೆಯಿಂದಲೇ ಒಂದು ಪ್ರತ್ಯೇಕ ಚಾನಲ್ ಪ್ರಾರಂಭಕ್ಕೂ ಪ್ರಯತ್ನಗಳು ನಡೆದಿವೆ. ಹಾಗೆಯೇ ರಾಜ್ಯದ ಆಯ್ದ ಸ್ಥಳಗಳಲ್ಲಿ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಹೊಸ ಸ್ಟುಡಿಯೋಗಳ ನಿರ್ಮಾಣಕ್ಕೆ ಈಗಾಗಲೇ ಅನುಮೋದನೆ ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಅವುಗಳು ಸಹ ಪ್ರಾರಂಭವಾಗಲಿವೆ ಎಂದು ಸಚಿವರು ತಿಳಿಸಿದರು. ಈ ಮೂಲಕ ಎಲ್ಲ ತರಗತಿಗಳ ವಿದ್ಯಾರ್ಥಿಗಳ ಕಲಿಕೆ ನಿರಂತರವಾಗಿರಲಿದ್ದು, ಸಮರ್ಥ ಅನುಪಾಲನಾ ವ್ಯವಸ್ಥೆ ಸಹ ಜಾರಿಯಲ್ಲಿರಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -

Related news

error: Content is protected !!