Monday, June 30, 2025
spot_imgspot_img
spot_imgspot_img

ಪ್ರೇಮಿಯೊಂದಿಗೆ ನವವಿವಾಹಿತೆ ನೇಣಿಗೆ ಶರಣು

- Advertisement -
- Advertisement -

ನವವಿವಾಹಿತೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಒಂದೇ ಮರಕ್ಕೆ ನೇಣು ಹಾಕಿಕೊಂಡು ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ (28), ಲಲಿತಾ ಹಲಗೇರಿ (21) ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು.

ಒಂದೇ ಊರಿನವರಾದ ಅಪ್ಪಣ್ಣ ಗೊರಕಿ ಹಾಗೂ ಲಲಿತಾ ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಅವರ ಪ್ರೀತಿಗೆ ಮನೆಯವರ ಒಪ್ಪಿಗೆ ಇರಲಿಲ್ಲ. ಕೊನೆಗೆ ಪೋಷಕರ ಒತ್ತಾಯಕ್ಕೆ ಮಣಿದು ಲಲಿತಾ ಹಲಗೇರಿ ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಯುವಕನೊಂದಿಗೆ ಏ. 4ರಂದು ವಿವಾಹವಾಗಿದ್ದಳು.

ಇದರಿಂದ ಅಪ್ಪಣ್ಣ-ಲಲಿತಾ ಇಬ್ಬರು ಮನ ನೊಂದಿದ್ದರು. ನೇಣಿಗೆ ಶರಣಾಗುವ ಮುನ್ನ ಇಬ್ಬರು ಒಂದೇ ಬಣ್ಣದ ಹಾಗೂ ಐ ಲವ್‌ ಯು ಎಂದು ಬರೆದಿರುವ ಒಂದೇ ತರಹದ ಟೀ ಶರ್ಟ್‌ ಧರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಮುಂಜಾನೆ ಗ್ರಾಮದ ಜನರು ಗದ್ದೆ ಕೆಲಸಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದ್ದು,ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ನರೇಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

- Advertisement -

Related news

error: Content is protected !!