Saturday, May 4, 2024
spot_imgspot_img
spot_imgspot_img

ಸಾಮಾಜಿಕ ಬಹಿಷ್ಕಾರದಿಂದ ಮನನೊಂದು ಆತ್ಮಹತ್ಯೆಗೆ ಶರಣು..!!

- Advertisement -G L Acharya panikkar
- Advertisement -
vtv vitla

ಸಾಮಾಜಿಕ ಬಹಿಷ್ಕಾರ ಹೇರಿದ್ದಕ್ಕಾಗಿ ಮನನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆಯ ಯಡವನಹಳ್ಳಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 17 ಮಂದಿಯ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಆತ್ಮಹತ್ಯೆ ಮಾಡಿಕೊಂಡಿದ್ದ ಶಿವರಾಜ್‌ ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.

ಗ್ರಾಮದ ವೈ.ಎಸ್ ಶಿವರಾಜು (45) ನೇಣಿಗೆ ಶರಣಾದ ವ್ಯಕ್ತಿ. ಮೃತನ ಸಹೋದರ ಮಹೇಶ್ ಎಂಬವರು ಬೇಗೂರು ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದು ಸಾಮಾಜಿಕ ಬಹಿಷ್ಕಾರ ಹಾಕಿದ್ದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಆಗ್ರಹಿಸಿದ್ದಾರೆ.

ಕೆಲ ದಿನಗಳ ಹಿಂದೆ ವ್ಯಕ್ತಿಯೊಬ್ಬನಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಗ್ರಾಮದ ಶಿವಣ್ಣನಾಯ್ಕ ಎಂಬಾತನಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದರು. ಇದರಿಂದ ಮನನೊಂದು ಶಿವಣ್ಣನಾಯ್ಕ ಆತ್ಮಹತ್ಯೆ ಗೆ ಮುಂದಾಗಿದ್ದ. ಆ ವೇಳೆ ಶಿವಣ್ಣನಾಯ್ಕನನ್ನು ಶಿವರಾಜು ಮನವೊಲಿಸಿ ಸಮಾಧಾನ ಪಡಿಸಿದ್ದ. ಇದಾದ ನಂತರ ಪ್ರಕರಣದಲ್ಲಿ ನೀನು ಶಾಮೀಲಾಗಿದ್ದೀಯಾ ಎಂದು ಊರಿನ ಮುಖಂಡರು ಸೇರಿ ಶಿವರಾಜುವುಗೆ ಸಾಮಾಜಿಕ ಬಹಿಷ್ಕಾರ ಹಾಕಿ, ಜೊತೆಗೆ 6 ಸಾವಿರ ರೂ ದಂಡ ವಿಧಿಸಿದ್ದರು. ಇದರಿಂದ ಮನನೊಂದು ಶಿವರಾಜು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬೇಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಕೈಗೊಳ್ಳಲಾಗಿದೆ.

- Advertisement -

Related news

error: Content is protected !!