ಚಂಡೀಗಢ: ಭಾರತದ ಕ್ರಿಕೆಟ್ ಆಟಗಾರ ಸುರೇಶ್ ರೈನಾ ಅವರ ಸೋದರತ್ತೆ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಮೂವರು ದರೋಡೆಕೋರರನ್ನು ಪಂಜಾಬ್ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.


ಆರೋಪಿಗಳೆಲ್ಲರೂ ಅಂತಾರಾಜ್ಯ ದರೋಡೆಕೋರರ ಗ್ಯಾಂಗ್ವೊಂದರ ಸದಸ್ಯರಾಗಿದ್ದಾರೆ ಅಂತ ಪಂಜಾಬ್ ಡಿಜಿಪಿ ದಿನಕರ್ ಗುಪ್ತಾ ಹೇಳಿದ್ಧಾರೆ.ಬಂಧಿತ ದರೋಡೆಕೋರರನ್ನು ಸವಾನ್, ಮೊಹಬ್ಬತ್, ಶಾರೂಕ್ ಖಾನ್ ಎಂದು ಎಸ್.ಐ.ಟಿಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಇವರ ಗ್ಯಾಂಗಿನಲ್ಲಿ 11 ಮಂದಿ ಇದ್ದು ಎಲ್ಲರನ್ನು ಪತ್ತೆ ಮಾಡಲಾಗಿದೆ. ಆದರೆ ಸದ್ಯ ಮೂವರು ಸಿಕ್ಕಿದ್ದು, ಇನ್ನುಳಿದ ಆರೋಪಿಗಳು ಪರಾರಿಯಾಗಿದ್ದಾರೆ. ಅವರನ್ನು ಹುಡುಕಲು ನಮ್ಮ ಸಿಬ್ಬಂದಿ ಶೋಧಕಾರ್ಯ ಮಾಡುತ್ತಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.


ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ನಮ್ಮ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರಿಂದ ಮಾರಕಾಸ್ತ್ರಗಳು ಮತ್ತು ಹಣವನ್ನು ವಶಕ್ಕೆ ಪಡೆಯಲಾಗಿದೆ ಎಂದು ಗುಪ್ತಾ ಹೇಳಿದ್ದಾರೆ.ಈ ಗ್ಯಾಂಗ್ ಅಂತರ್ ರಾಜ್ಯ ಕಳ್ಳತನ ನಡೆಸುತ್ತಿದ್ದು ಉ.ಪ್ರ,ಪಂಜಾಬ್ , ಜಮ್ಮು ಮತ್ತು ಕಾಶ್ಮೀರದಲ್ಲೂ ಕಳ್ಳತನ ನಡೆಸುತ್ತದೆ. ರೈಲ್ವೆ ಟ್ರ್ಯಾಕ್ ಮತ್ತು ಕ್ಯಾನಲ್ಸ್ ಬಳಸಿ ಲ್ಯಾಂಡ್ ಮಾರ್ಕ್ ಗುರುತಿಸಿ ಕೃತ್ಯ ಎಸಗುತ್ತಿದ್ದ ಬಗ್ಗೆ ತಿಳಿದು ಬಂದಿದೆ.
