ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸುವಂತೆ ಬಿಹಾರ ಸರ್ಕಾರ ನೀಡಿರುವ ಶಿಫಾರಸ್ಸನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ಈ ಬಗ್ಗೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದರು.
ಸುಶಾಂತ್ ತಂದೆ ತಂದೆ , ರಿಯಾ ಚಕ್ರವರ್ತಿ ವಿರುದ್ಧ ದಾಖಲಿಸಿರುವ ಎಫ್ ಐ ಆರ್ ಯನ್ನು ಪಾಟ್ನಾದಿಂದ ಮುಂಬೈ ಕೋರ್ಟ್ ಗೆ ವರ್ಗಾಯಿಸುವಂತೆ ಸುಪ್ರೀಂಕೋರ್ಟ್ ಗೆ ರಿಯಾ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ಇಂದು ನಡೆಯಿತು. ಈ ವೇಳೆ ಬಿಹಾರದಿಂದ ಮಹಾರಾಷ್ಟ್ರಕ್ಕೆ ಪ್ರಕರಣದ ತನಿಖೆಗೆ ಬಂದ ಐಪಿಎಸ್ ಅಧಿಕಾರಿ ವಿನಯ್ ತಿವಾರಿಯನ್ನ ಬಲವಂತಾಗಿ ಹೋಂ ಕ್ವಾರಂಟೈನ್ ಗೆ ಒಳಪಡಿಸಿದ ಸರ್ಕಾರಕ್ಕೆ ಸುಪ್ರೀಂ ಚಾಟಿ ಬೀಸಿದೆ.
ಮುಂಬೈ ಪೊಲೀಸರಿಗೆ ಒಳ್ಳೆಯ ಗೌರವವಿದ್ದರೂ ತನಿಖೆಗೆ ಬಂದ ಅಧಿಕಾರಿಯನ್ನು ಬಲವಂತಾಗಿ ಕ್ವಾರಂಟೈನ್ ಗೆ ಹಾಕುವುದು ಒಳ್ಳೆಯ ಸಂದೇಶವಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.
ಇಲ್ಲಿಯವರೆಗೆ ನಡೆದಿರುವ ತನಿಖಾ ವರದಿಯನ್ನು ಸಲ್ಲಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಅಲ್ಲದೇ, ರಿಯಾ ಸಲ್ಲಿಸಿರುವ ಅರ್ಜಿ ಬಗ್ಗೆ 3 ದಿನಗಳೊಳಗಾಗಿ ಬಿಹಾರ,ಮಹಾರಾಷ್ಟ್ರ ಸರ್ಕಾರ, ಕೇಂದ್ರ ಸರ್ಕಾರ, ಸುಶಾಂತ್ ಸಿಂಗ್ ತಂದೆ ಕೋರ್ಟ್ ಗೆ ಪ್ರತಿಕ್ರಿಯೆ ನೀಡಬೇಕು ಎಂದು ಆದೇಶಿಸಿದೆ.