- Advertisement -
- Advertisement -
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಮಾನಸಿಕ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಮುಂಬೈ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ತಿಳಿಸಿದ್ದಾರೆ. ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸುಶಾಂತ್ ಅವರಿಗೆ ಬೈಪೋಲಾರ್ ಡಿಸಾರ್ಡರ್ ಇತ್ತು. ಹೀಗಾಗಿ ಅವರು ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರು ಎಂದರು.
ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯವರೆಗೆ 56 ಮಂದಿಯ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದೇವೆ. ತನಿಖೆ ನಡೆಯುತ್ತಿದೆ. ವೃತ್ತಿಯಲ್ಲಿ ವೈಷಮ್ಯತೆ,ಹಣಕಾಸು ವ್ಯವಹಾರ, ಆರೋಗ್ಯ ಹೀಗೆ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದೇವೆ. ಅವರ ಸಾವಿಗೆ ಕಾರಣ ಏನು ಅನ್ನೋದು ನಮ್ಮ ತನಿಖೆಯ ವಿಷಯ ಎಂದು ಹೇಳಿದರು.
- Advertisement -