Thursday, May 9, 2024
spot_imgspot_img
spot_imgspot_img

ಪತ್ನಿಯ ಶೀಲ ಶಂಕಿಸಿ ಕೊಲೆಗೈದ ಪಾಪಿ ಪತಿ..!

- Advertisement -G L Acharya panikkar
- Advertisement -

ತನ್ನ ಪತ್ನಿಯನ್ನು ಶೀಲ ಶಂಕಿಸಿ ಪತಿಯೊಬ್ಬನು ಹತ್ಯೆ ಮಾಡಿರುವ ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಎಸ್.ಸಂಕನಹಳ್ಳಿ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಆಲಗೌಡನಹಳ್ಳಿ ಮೂಲದ ಅಂಬಿಕಾ (28) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಅಂಬಿಕಾ ಅವರು ಹಾಸನದಲ್ಲಿ ಫ್ಯಾಕ್ಟರಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಪತಿ ಚಂದ್ರಮೌಳಿ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.

ಆರೋಪಿಯು ಕೊಲೆ ಮಾಡಿದ ಬಳಿಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!