Wednesday, May 1, 2024
spot_imgspot_img
spot_imgspot_img

ಶಾಲೆಗೆ ಹೋಗಿ ಬರುತ್ತೇನೆ ಎಂದ ಶಿಕ್ಷಕಿ ನಾಪತ್ತೆ; ಅನುಮಾನಾಸ್ಪದವಾಗಿ ಶವ ಪತ್ತೆ..!

- Advertisement -G L Acharya panikkar
- Advertisement -

ಶಾಲೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋಗಿದ್ದ ಶಿಕ್ಷಕಿಯೊಬ್ಬರು ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆ ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿ ದೀಪಿಕಾ (28) ಎಂದು ಗುರುತಿಸಲಾಗಿದೆ.

ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಘಟನಾ ಸ್ಥಳಕ್ಕೆ ಮಂಡ್ಯ ಎಸ್‌ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.

- Advertisement -

Related news

error: Content is protected !!