Wednesday, May 15, 2024
spot_imgspot_img
spot_imgspot_img

‘ಸ್ವಾಮಿತ್ವ ಯೋಜನೆ’ಗೆ ಪ್ರಧಾನಿ ಮೋದಿಯಿಂದ ಚಾಲನೆ.

- Advertisement -G L Acharya panikkar
- Advertisement -

ಗ್ರಾಮೀಣ ಪ್ರದೇಶಗಳಲ್ಲಿ ಸುಧಾರಿತ ತಂತ್ರಜ್ಞಾನದ ಸ್ವಾಮಿತ್ವ ಯೋಜನೆಯ ಮೂಲಕ ಆಸ್ತಿ ಕಾರ್ಡ್ ವಿತರಣೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದ್ದಾರೆ.


ಈ ಕಾರ್ಡ್ ಗಳು ಹಳ್ಳಿಗರ ಮನೆಗಳು ಮತ್ತು ಅವರು ಹೊಂದಿರುವ ಸುತ್ತಮುತ್ತಲಿನ ಪ್ರದೇಶಗಳ ಆಸ್ತಿ ಹಕ್ಕುಪತ್ರಗಳ ಭೌತಿಕ ಪ್ರತಿಗಳಾಗಲಿವೆ. ಏಪ್ರಿಲ್ ನಲ್ಲಿ ಆರಂಭಿಸಿದ ಸ್ವಾಮಿತ್ವ ಯೋಜನೆ ಗ್ರಾಮೀಣ ಜನರು ಆಸ್ತಿಯನ್ನು ಆರ್ಥಿಕ ಆಸ್ತಿಯಾಗಿ ಬಳಸಲು ಅವಕಾಶ ನೀಡಲಿದೆ. ಯೋಜನೆಯಿಂದ 6.62 ಲಕ್ಷ ಗ್ರಾಮಗಳಿಗೆ ಲಾಭವಾಗಲಿದ್ದು, ಯೋಜನೆಯಡಿಯಲ್ಲಿ ರೈತರ ಜಮೀನುಗಳು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದೆ.


ಯೋಜನೆಯಲ್ಲಿ ಉತ್ತರಪ್ರದೇಶದ 346, ಹರಿಯಾಣದ 221, ಮಹಾರಾಷ್ಟ್ರದ 100, ಮಧ್ಯಪ್ರದೇಶದ 44, ಉತ್ತರಾಖಂಡದ 50 ಮತ್ತು ಕರ್ನಾಟಕದ 2 ಗ್ರಾಮಗಳು ಸೇರಿ ಒಟ್ಟು 763 ಗ್ರಾಮಗಳು ಫಲಾನುಭವಿಸಿಗಳು ಯೋಜನೆಯ ಲಾಭವನ್ನು ಪಡೆಯಲಿದ್ದಾರೆ.

- Advertisement -

Related news

error: Content is protected !!