


ಹೈದರಾಬಾದ್: ಇಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 96 ರನ್‌ಗಳಿಂದ ಸೋಲಿಸಿ ಮೂರನೇ ಬಾರಿ ವಿಶ್ವಕಪ್ ಕಿರೀಟ ಮುಡಿಗೇರಿಸಿಕೊಂಡಿತು.ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 255 ರನ್ ಗಳಿಸಿತು. ಸಂಜು ಸ್ಯಾಮ್‌ಸನ್ ಭರ್ಜರಿ ಅರ್ಧಶತಕದೊಂದಿಗೆ ಮಿಂಚಿದರೆ, ಅಭಿಷೇಕ್ ಶರ್ಮಾ 21 ಎಸೆತಗಳಲ್ಲಿ 52 ರನ್ ಬಾರಿಸಿ ಗಮನ ಸೆಳೆದರು. ಇಶಾನ್ ಕಿಶನ್ ಕೂಡ ಅರ್ಧಶತಕ ದಾಖಲಿಸಿದರು.256 ರನ್ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ ತಂಡ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಟಿಮ್ ಸೈಫೆರ್ಟ್ 52 ರನ್ ಹಾಗೂ ಮಿಚೆಲ್ ಸಾಂಟ್ನರ್ 43 ರನ್ ಗಳಿಸಿದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ತಂಡ 19 ಓವರ್‌ಗಳಲ್ಲಿ 159 ರನ್‌ಗಳಿಗೆ ಆಲೌಟ್ ಆಯಿತು.ಭಾರತದ ಪರ ಜಸ್‌ಪ್ರೀತ್ ಬುಮ್ರಾ 4 ವಿಕೆಟ್, ಅಕ್ಸರ್ ಪಟೇಲ್ 3 ವಿಕೆಟ್ ಪಡೆದು ಮಿಂಚಿದರು. ಬುಮ್ರಾ ಪಂದ್ಯಶ್ರೇಷ್ಠರಾಗಿದ್ದು, ಸಂಜು ಸ್ಯಾಮ್‌ಸನ್ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದರು.









