Thursday, June 18, 2026
spot_imgspot_img
spot_imgspot_img

ಜೈಶ್‌ ಉಗ್ರ ಸಂಘಟನೆ ವಿರುದ್ಧ ಕ್ರಮ ತಗೊಳ್ಳಿ – ಪಾಕ್‌ಗೆ ಅಮೆರಿಕ ಎಚ್ಚರಿಕೆ..!

- Advertisement -
- Advertisement -

ಇಸ್ಲಾಮಾಬಾದ್‌/ವಾಷಿಂಗ್ಟನ್‌ : ಜೈಶ್‌ ಎ ಮೊಹಮ್ಮದ್‌ ಭಯೋತ್ಪಾದಕ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮ ಕೈಗೊಳ್ಳುವಂತೆ ಅಮೆರಿಕ ಸಂಸದ ಬ್ರಾಡ್‌ ಶೆರ್ಮನ್ ಪಾಕಿಸ್ತಾನಕ್ಕೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.

ಅಲ್ಲದೇ ಜೈಶ್‌ ಸಂಘಟನೆಯ ನೀಚ ಕೃತ್ಯಗಳನ್ನು ಪಾಕಿಸ್ತಾನದ ಮಾಜಿ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ವರದಿಯಾಗಿದೆ. ಪಾಕಿಸ್ತಾನದ ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ನೇತೃತ್ವದ ಪಾಕಿಸ್ತಾನಿ ನಿಯೋಗವನ್ನು ವಾಷಿಂಗ್ಟನ್‌ನಲ್ಲಿ ಭೇಟಿಯಾದ ಶೆರ್ಮನ್, ಜೆಇಎಂನ ನೀಚ ಕೃತ್ಯಗಳ ಬಗ್ಗೆ ತಿಳಿಸಿದ್ದಾರೆ.

2002 ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್‌ನ ಪತ್ರಕರ್ತ ಡೇನಿಯಲ್ ಪರ್ಲ್ ಅವರ ಹತ್ಯೆ ಸೇರಿದಂತೆ ಅನೇಕ ಘೋರ ಅಪರಾಧಗಳಿಗೆ ಈ ಗುಂಪು ಕಾರಣವಾಗಿದೆ. ಹಾಗಾಗಿ ಈ ಉಗ್ರ ಸಂಘಟನೆಯನ್ನು ಬುಡಸಮೇತ ನಿರ್ಮೂಲನೆ ಮಾಡಬೇಕು. ಭಯೋತ್ಪಾದನೆ ವಿರುದ್ಧ ಬಲವಾದ ಹೋರಾಟ ನಡೆಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಪಾಕಿಸ್ತಾನ ತೆಗೆದುಕೊಳ್ಳಬೇಕು ಎಂದು ಎಚ್ಚರಿಸಿದ್ದಾರೆ.

ಪಾಕ್‌ ಮುಖವಾಡ ಬಯಲು ಮಾಡಲು ಭಾರತ ಕಳುಹಿಸಿರುವ ಸಂಸದ ಶಶಿ ತರೂರ್‌ ನೇತೃತ್ವದ ಸರ್ವಪಕ್ಷ ನಿಯೋಗ ಸಹ ವಾಷಿಂಗ್ಟನ್‌ನಲ್ಲಿದ್ದು, ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಹಾಗೂ ಪಾಕ್‌ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡುತ್ತಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದೆ.

ಈ ನಡುವೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಬ್ರಾಡ್‌ ಶೆರ್ಮನ್‌, ಭಯೋತ್ಪಾದನೆ ವಿರುದ್ಧದ ಹೋರಾಟದ ಮಹತ್ವದನ್ನು ನಾನು ಪಾಕಿಸ್ತಾನಿ ನಿಯೋಗಕ್ಕೆ ತಿಳಿಸಿದ್ದೇನೆ. ಅದರಲ್ಲೂ ಮುಖ್ಯವಾಗಿ ಜೈಶ್‌ ಎ ಮೊಹಮ್ಮದ್‌ ಉಗ್ರ ಸಂಘಟನೆ ವಿರುದ್ಧ ನಿರ್ಣಾಯಕ ಕ್ರಮಕ್ಕೆ ಸೂಚಿಸಿದ್ದೇನೆ ಎಂದು ಹೇಳಿದೆ.

- Advertisement -

Related news

error: Content is protected !!