- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮಡಿಕೇರಿ: ಕೊಡಗಿನ ತಲಕಾವೇರಿಯಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿ ಕಣ್ಮರೆಯಾದವರಿಗಾಗಿ ಶೋಧಕಾರ್ಯಾಚರಣೆ ಮುಂದುವರಿದಿದೆ. ಎನ್ ಡಿಆರ್ ಎಫ್ ತಂಡ ಸ್ಥಳದಲ್ಲೇ ಬೀಡುಬಿಟ್ಟಿದ್ದು, ನಿರಂತರ ಕಾರ್ಯಾಚರಣೆ ನಡೆಸುತ್ತಿದೆ.
ಶನಿವಾರ ನಾರಾಯಣಾಚಾರ್ಯ ಅವರ ಸಹೋದರ ಆನಂದ ತೀರ್ಥ ಅವರ ಮೃತದೇಹ ಪತ್ತೆಯಾಗಿತ್ತು. ಆದರೆ ಅರ್ಚಕ ನಾರಾಯಣಾಚಾರ್ಯ, ಪತ್ನಿ ಶಾಂತ, ಪೂಜೆ ಸಹಾಯಕರಾದ ರವಿಕಿರಣ್ ಹಾಗೂ ಶ್ರೀನಿವಾಸ್ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಜಿಲ್ಲೆಯಲ್ಲಿ ಭಾರೀ ಗಾಳಿ ಸಹಿತ ಮಳೆಯಾಗುತ್ತಿರುವುದರಿಂದ ಕಾರ್ಯಾಚರಣೆಗೆ ಅಡಚಣೆಯಾಗುತ್ತಿದೆ.
- Advertisement -