Tuesday, July 1, 2025
spot_imgspot_img
spot_imgspot_img

ದ.ಕ.ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ

- Advertisement -
- Advertisement -

ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯ – ಶ್ರೀಮತಿ ಭಾರತಿ ಸುರೇಂದ್ರ ರಾವ್

ಕಡೇಶಿವಾಲಯ: ಬಂಟ್ವಾಳ ತಾಲೂಕಿನ ಕಡೇಶಿವಾಲಯ ಗ್ರಾಮದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಶೇರಾದಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಡೇಶಿವಾಲಯ ಗ್ರಾಮ ಪಂಚಾಯತ್ ಅದ್ಯೆಕ್ಷೆ ಶ್ರೀಮತಿ ಭಾರತಿ ಸುರೇಂದ್ರ ರಾವ್ ಇವರು ಮಾತನಾಡಿ ಒಂದು ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿ ಮುಖ್ಯವಾಗಿದೆ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ತರಗತಿ ಕೋಣೆಗಳಲ್ಲಿ ವಿದ್ಯಾರ್ಥಿಗಳ ಭವಿಷ್ಯ ಅಡಗಿದೆ ಜೊತೆಗೆ ಅದಕ್ಕೆ ಪೂರಕವಾದ ಸಹಪಠ್ಯಗಳು ಮತ್ತು ಮಕ್ಕಳ ಹವ್ಯಾಸಗಳನ್ನು ಪ್ರತಿಭೆಗಳನ್ನು ಹೊರ ತರುವಲ್ಲಿ ವೇದಿಕೆಯು ಪ್ರಮುಖವಾಗಿದೆ. ಈ ದೃಷ್ಟಿಯಲ್ಲಿ ಶಾಲಾ ವಾರ್ಷಿಕೋತ್ಸವಗಳು ಮಕ್ಕಳಿಗೆ ಹೊಸ ಹುರುಪನ್ನು ತಂದು ಶೈಕ್ಷಣಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬದುಕಿನಲ್ಲಿ ಉತ್ತಮ ಫಲಿತಾಂಶವನ್ನು ಉಂಟು ಮಾಡುತ್ತವೆ. ಪರಿಸರ, ಪೋಷಕರು ಹಾಗೂ ವಿದ್ಯಾಭಿಮಾನಿಗಳು ಶಾಲಾ ಮತ್ತು ಮಕ್ಕಳ ಏಳಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ ಎಂದು ಹೇಳಿದರು.

ಕನ್ನಡ ಶಾಲೆಗಳ ಅಸ್ತಿತ್ವ ಪೋಷಕರ ಕೈಯಲ್ಲಿದೆ, ಇಂಗ್ಲೀಷ್ ವ್ಯಾಮೋಹಕ್ಕೆ ಬಲಿಯಾಗಿ ಕನ್ನಡ ಶಾಲೆಗಳು ಮುಚ್ಚುವ ಪರಿಸ್ಥಿತಿಗೆ ಬಂದಿದೆ. ಪೋಷಕರು ಮಕ್ಕಳಿಗೆ ಆಸ್ತಿ ಮಾಡದೆ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಮಕ್ಕಳನ್ನೇ ಆಸ್ತಿ ಮಾಡಿ ಎಂದು ಕಡೇಶಿವಾಲಯ ಗ್ರಾಮ ಪಂಚಾಯತಿನ ಮಾಜಿ ಅಧ್ಯಕ್ಷ ಸುರೇಶ್ ಬನಾರಿ ಹೇಳಿದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿಗಳನ್ನು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾರವರನ್ನು ಶಾಲಾಭಿವೃದ್ಧಿ ಸಮಿತಿಯ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು. ಕಡೇಶಿವಾಲಯ ಗ್ರಾಮದ ಸ್ವಚ್ಛತಾ ಸೇನಾಣಿಗಳಾದ ಲಕ್ಷ್ಮಿ, ಪ್ರಮೀಳಾ, ಸವಿತಾ ರವರನ್ನು ಅಭಿನಂದಿಸಲಾಯಿತು.

ಶಾಲಾ ವಾರ್ಷಿಕೋತ್ಸವ ನಿಮಿತ್ತ ಅಂಗನವಾಡಿ ಪುಟಾಣಿಗಳಿಗೆ ಹಾಗೂ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ನೀಡಿ ಪ್ರೋತ್ಸಾಹಿಸಲಾಯಿತು. ಕಲಿಕೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಮಕ್ಕಳಿಗೆ ದಾನಿಗಳು ನೀಡಿದ ನಗದು ಬಹುಮಾನ ಹಾಗೂ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಶಾಲೆಯ ಅಭಿವೃದ್ಧಿಯ ದೃಷ್ಟಿಯಲ್ಲಿ ವಿಶೇಷವಾಗಿ ಸಹಕರಿಸಿದವರನ್ನು ಗುರುತಿಸಿ ಸ್ಮರಣೆಕೆ ನೀಡಿ ಗೌರವಿಸಲಾಯಿತು. ಹಿರಿಯ ವಿದ್ಯಾರ್ಥಿಗಳಿಗೆ ನಡೆಸಿದ ಕ್ರೀಡಾಕೂಟದ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಣಿ ರೋಟರಿ ಕ್ಲಬ್ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಐಡಿಯಲ್ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ನಿವೃತ್ತ ಸೈನಿಕ ವಿದ್ಯಾದರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ, ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್ ಅಂಜನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ, ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶಾಲಾ ಮಕ್ಕಳು ಪ್ರಾರ್ಥಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ ಸ್ವಾಗತಿಸಿದರು, ಶಿಕ್ಷಕ ಗೋಪಾಲಗೌಡ ಸದರಿ ವರ್ಷದ ವರದಿ ವಾಚಿಸಿ, ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ವಾಚಿಸಿದರು. ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.

ಸಭಾ ಕಾರ್ಯಕ್ರಮದ ಬಳಿಕ ಅಂಗನವಾಡಿ ಪುಟಾಣಿಗಳಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

- Advertisement -

Related news

error: Content is protected !!