




ಕಲ್ಲಂಗಳ ಕೇಪು: ಸರ್ಕಾರಿ ಪ್ರೌಢಶಾಲೆ ಕಲ್ಲಂಗಳ ಕೇಪು ಇಲ್ಲಿ ಡಿ.27ರಂದು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ನಡೆಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಗಿರಿಜಾ ಅವರು ವಹಿಸಿದ್ದರು.
ಕಲ್ಲಂಗಳ ಮೂಲದ ಪುಣೆಯ ಉದ್ಯಮಿ ಸತೀಶ್ ರೈ ಕಲ್ಲಂಗಳ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪುರುಷೋತ್ತಮ್ ಗೌಡ, ಜೀವನ್ ರಾಮ್ ಶೆಟ್ಟಿ, ಜಯಶೀಲಾ, ಪುತ್ತೂರು ಉಪವಲಯದ DRFO ವೀರಣ್ಣ, ಊರಿನ ಪ್ರಮುಖರಾದ ಪ್ರಭಾಕರ್ ಶೆಟ್ಟಿ ದಂಬೇಕಾನ್, ಬಾಲಕೃಷ್ಣ ಶೆಟ್ಟಿ ಬೇಂಗೋಡಿ, ನಾರಾಯಣ ಪುರುಷ, ಗೋವಿಂದರಾಯ ಶೆಣೈ, ಪ್ರಗತಿಪರ ಜೇನು ಕೃಷಿಕರಾದ ಸುಧಾಕರ್ ಪೂಜಾರಿ ಬಡೆಕೋಡಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ರೈ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಹಿರಿಯ ಶಿಕ್ಷಕರಾದ ಲಕ್ಷ್ಮಣ್ ಟಿ. ನಾಯಕ್ ಅವರು ಅತಿಥಿಗಳನ್ನು ಸ್ವಾಗತಿಸಿದರು. ಶಾಲಾ ಮುಖ್ಯ ಶಿಕ್ಷಕಿ ಹಾಗೂ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾಲತಿ ಕೆ. ಅವರು ವಾರ್ಷಿಕ ವರದಿಯನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್‌ನ ಗೌರವಾನ್ವಿತ ನ್ಯಾಯಾಧೀಶರಾದ ರಾಜೇಶ್ ರೈ ಕಲ್ಲಂಗಳ ಹಾಗೂ ಉದ್ಯಮಿ ಸತೀಶ್ ರೈ ಅವರನ್ನು ಗೌರವಿಸಲಾಯಿತು. ಮಾನ್ಯ ನ್ಯಾಯಾಧೀಶರು ವಿದ್ಯಾರ್ಥಿಗಳ ಭವಿಷ್ಯದ ಕುರಿತು ಪ್ರೇರಣಾದಾಯಕವಾಗಿ ಮಾತನಾಡಿದರು.
ಶೈಕ್ಷಣಿಕ ವರ್ಷದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಮಧ್ಯಾಹ್ನದ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಪೂರ್ಣಿಮಾ ಎಸ್. ಕಾಮ್ಮಾಜೆ ಅವರು ವಂದಿಸಿದರು. ಕಾರ್ಯಕ್ರಮವನ್ನು ರಮೇಶ್ ಡಿ. ನಿರ್ವಹಿಸಿದರು.







