Tuesday, June 9, 2026
spot_imgspot_img
spot_imgspot_img

ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥನ ಹತ್ಯೆ ಆರೋಪಿ ಪೊಲೀಸ್ ಎನ್‌ಕೌಂಟರ್‌ಗೆ ಬಲಿ..!

- Advertisement -
- Advertisement -

ಚೆನ್ನೈ: ತಮಿಳುನಾಡು ಬಿಎಸ್‌ಪಿ ಮುಖ್ಯಸ್ಥ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆಯಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿ ನಿನ್ನೆ ಸಂಜೆ ಚೆನ್ನೈನ ಮಾಧವರಂ ಬಳಿ ಪೊಲೀಸರು ನಡೆಸಿದ ಎನ್‌ಕೌಂಟರ್‌ಗೆ ಶನಿವಾರ ಬಲಿಯಾಗಿದ್ದಾನೆ.

ತಿರುವೆಂಗಡಂ ಎಂಬ ಆರೋಪಿ ಪೊಲೀಸರ ಎನ್‌ಕೌಂಟರ್ ನಲ್ಲಿ ಸಾವನ್ನಪ್ಪಿದವ.

ಜು.11 ರಂದು 5 ದಿನಗಳ ಕಾಲ ಆರೋಪಿಯನ್ನು ಸೆಂಬಿಯಂ ಪೊಲೀಸರು ಕಸ್ಟಡಿಗೆ ಪಡೆದುಕೊಂಡಿದ್ದರು. ವಿಚಾರಣೆಗೆಂದು ಆರೋಪಿಯನ್ನು ಪರಂಗಿಮಲೈ ಸಶಸ್ತ್ರ ಮೀಸಲು ಠಾಣೆಗೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಆರೋಪಿಯು ಪೊಲೀಸರ ಮೇಲೆ ದಾಳಿಗೆ ಮುಂದಾಗಿದ್ದು, ಆಗ ಪೊಲೀಸರು ಆತನ ಮೇಲೆ ಎನ್‌ಕೌಂಟರ್ ಮಾಡಿದ್ದಾರೆ. ಗಂಭೀರ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

- Advertisement -

Related news

error: Content is protected !!