Thursday, June 25, 2026
spot_imgspot_img
spot_imgspot_img

ತಮಿಳುನಾಡು ವಿಧಾನಸಭಾ ಚುನಾವಣೆ: ಅಣ್ಣಾ ಮಲೈ ಹಾಗೂ ನಟಿ ಖುಷ್ಬೂಗೆ ಬಿಜೆಪಿ ಟಿಕೆಟ್

- Advertisement -
- Advertisement -

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣಾ ಅಖಾಡ ರಂಗೇರಿದ್ದು, ಬಿಜೆಪಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದೆ.

ಬಿಜೆಪಿ ನಾಯಕ ಅರುಣ್ ಸಿಂಗ್ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದಾರೆ. ಮಾಜಿ ಐಪಿಎಸ್ ಅಧಿಕಾರಿ ಸಿಂಗಂ ಖ್ಯಾತಿಯ ಅಣ್ಣಾ ಮಲೈ ಹಾಗೂ ಖ್ಯಾತ ನಟಿ ಖುಷ್ಬೂ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಅರವಕುರುಚಿ ಕ್ಷೇತ್ರದಿಂದ ಅಣ್ಣಾಮಲೈ ಹಗೂ ಖುಷ್ಬೂ ಥೌಸಂಡ್ ಲೈಟ್ಸ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ತಮಿಳುನಾಡು ಹಾಗೂ ಪುದುಚೆರಿಯಲ್ಲಿ ಏಪ್ರಿಲ್ 6ರಂದು ಚುನಾವಣೆ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ, ಎಐಎಡಿಎಂಕೆ ಜೊತೆ ಮೈತ್ರಿ ಮಾಡಿಕೊಂಡಿದೆ.

- Advertisement -

Related news

error: Content is protected !!