Friday, May 17, 2024
spot_imgspot_img
spot_imgspot_img

ತಮಿಳುನಾಡಿನಲ್ಲಿ ಮೇ.10ರಿಂದ ಲಾಕ್ ಡೌನ್ ಘೋಷಣೆ!

- Advertisement -G L Acharya panikkar
- Advertisement -

ಚೆನ್ನೈ: ದಕ್ಷಿಣದ ಮತ್ತೊಂದು ರಾಜ್ಯ ತಮಿಳುನಾಡಿನಲ್ಲಿ ಲಾಕ್ ಡೌನ್ ಘೋಷಿಸಲಾಗಿದೆ.

ಕೋವಿಡ್ ಪ್ರಕರಣಗಳು ವಿಪರೀತ ಏರುತ್ತಿರುವ ಹಿನ್ನೆಲೆಯಲ್ಲಿ ಮೇ.10ರಿಂದ 24ರವರೆಗೆ ಎರಡು ವಾರಗಳ ಕಾಲ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಮಾಡುವುದಾಗಿ ತಮಿಳುನಾಡು ಸರ್ಕಾರ ಘೋಷಿಸಿದೆ.

‘ಅನಿವಾರ್ಯ ಕಾರಣಗಳಿಂದಾಗಿ’ ಲಾಕ್‌ಡೌನ್ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವೈದ್ಯಕೀಯ ತಜ್ಞರೊಂದಿಗೆ ಸಮಾಲೋಚನೆ ಮತ್ತು ಶುಕ್ರವಾರ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯ ಬಳಿಕ ಅಭಿಪ್ರಾಯಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

‘ಮೇ 10 ರಂದು ಬೆಳಿಗ್ಗೆ 4 ರಿಂದ ಮೇ 24ರ ಬೆಳಿಗ್ಗೆ 4 ಗಂಟೆವರೆಗೆ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸಲಾಗುವುದು’ ಎಂದು ಅವರು ಹೇಳಿದ್ದಾರೆ. ತಮಿಳುನಾಡಿನಲ್ಲಿ ಶುಕ್ರವಾರ 26,465 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಒಟ್ಟು ಸೋಂಕಿರ ಸಂಖ್ಯೆ 13.23 ಲಕ್ಷಕ್ಕೆ ಏರಿದೆ. ಕಳೆದ 24 ಗಂಟೆಗಳಲ್ಲಿ ದಾಖಲೆಯ 197 ಸಾವು ಸಂಭವಿಸಿದ್ದು, ಒಟ್ಟು ಸಾವಿನ ಸಂಖ್ಯೆ 15,171 ಕ್ಕೆ ಜಿಗಿದಿದೆ. ಆರೋಗ್ಯ ಇಲಾಖೆಯ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ1,35,355 ರಷ್ಟಾಗಿದೆ.

- Advertisement -

Related news

error: Content is protected !!