Saturday, August 1, 2026
spot_imgspot_img
spot_imgspot_img

ತಮಿಳುನಾಡು: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ದುರಂತ- ಆರು ಮಂದಿ ಸಾವು!

- Advertisement -
- Advertisement -

ಚೆನ್ನೈ: ತಮಿಳುನಾಡಿನ ಶಿವಕಾಶಿಯ ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ದುರಂತರದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ವಿರುಧುನಗರ ಆರೋಗ್ಯ ಸೇವೆಗಳ ಜಂಟಿ ನಿರ್ದೇಶಕ ಮಾಹಿತಿ ನೀಡಿದ್ದಾರೆ.

ಕಲೈಯಾರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ ಮತ್ತಷ್ಟು ಮಂದಿ ಗಾಯಗೊಂಡಿದ್ದಾರೆ. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರ್ಖಾನೆಯಲ್ಲಿ ಹೆಚ್ಚಿನ ಸ್ಫೋಟ ಉಂಟಾಗದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ಮುನ್ನೆಚ್ಚರಿಕೆಗಳನ್ನು ಕೈಗೊಂಡಿದ್ದಾರೆ.

ಇದೇ ಪ್ರದೇಶದಲ್ಲಿ ಕಳೆದ ಎರಡು ವಾರಗಳ ಹಿಂದೆ ಸಂಭವಿಸಿದ ಅಗ್ನಿ ದುರಂತರದಲ್ಲಿ 23 ಜನರು ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತ ಸಂಭವಿಸಿದೆ. ಪಟಾಕಿಗಳನ್ನು ತಯಾರಿಸುವ ಸಂದರ್ಭದಲ್ಲಿ ಕೆಲವು ಕೆಮಿಕಲ್​​ಗಳನ್ನು ಮಿಕ್ಸ್​ ಮಾಡಿದ ಸಂದರ್ಭ ಬೆಂಕಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

- Advertisement -

Related news

error: Content is protected !!