- Advertisement -
- Advertisement -



ಕೆದಿಲ : ಟ್ಯಾಂಕರ್ ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಸಂಭವಿಸಿದೆ.
ಗಾಯಗೊಂಡ ಬೈಕ್ ಸವಾರನನ್ನು ಬೆಳ್ತಂಗಡಿ ನಿವಾಸಿ ಗಣೇಶ್ (39) ಎಂದು ಗುರುತಿಸಲಾಗಿದೆ.
ಗಣೇಶ್ ಅವರು ಬೈಕಿನಲ್ಲಿ ಬರುತ್ತಿರುವಾಗ ಕೆದಿಲ ಗ್ರಾಮದ ಗಡಿಯಾರ ಎಂಬಲ್ಲಿ ಮಹಮ್ಮದ್ ಆಸಿಫ್ ಎಂಬವರು ಚಲಾಯಿಸುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದು, ಬೈಕ್ ಸಮೇತ ರಸ್ತೆಗೆಸೆಯಲ್ಪಟ್ಟ ಗಣೇಶ್ ಅವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರು ಎ ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -