Thursday, June 4, 2026
spot_imgspot_img
spot_imgspot_img

ಎಲ್‌ಪಿಜಿ ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ; ಭಾರೀ ಸ್ಫೋಟಕ್ಕೆ 7 ವಾಹನಗಳು ಭಸ್ಮ

- Advertisement -
- Advertisement -

ಜೈಪುರ: ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ತುಂಬಿದ್ದ ಟ್ರಕ್‌ಗೆ, ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಭಾರೀ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ 7 ವಾಹನಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾದ ಘಟನೆ ಜೈಪುರ-ಅಜ್ಮೀರ್ ಹೆದ್ದಾರಿಯಲ್ಲಿ ನಡೆದಿದೆ.

ಚಾಲಕ ರಸ್ತೆಬದಿಯಲ್ಲಿ ಟ್ರಕ್ ಅನ್ನು ನಿಲ್ಲಿಸಿ, ಊಟಕ್ಕೆಂದು ಹೋಟೆಲ್ ಹೋಗಿದ್ದ. ಈ ವೇಳೆ ಟ್ಯಾಂಕರೊಂದು ತಿರುವು ಪಡೆಯುತ್ತಿದ್ದಾಗ ನಿಯಂತ್ರಣ ತಪ್ಪಿ ಸಿಲಿಂಡರ್ ತುಂಬಿದ್ದ ಟ್ರಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೆಂಕಿ ಹೊತ್ತಿಕೊಂಡು, ನಂತರ ಗ್ಯಾಸ್ ಸಿಲಿಂಡರ್‌ಗಳು ಒಂದರ ನಂತರ ಒಂದರಂತೆ ಸರಣಿ ಸ್ಫೋಟಗೊಂಡಿದೆ.

ಸಿಲಿಂಡರ್‌ಗಳ ಸ್ಫೋಟದ ಸದ್ದು ಕಿಲೋಮೀಟರ್ ಉದ್ದಕ್ಕೂ ಕೇಳಿಸಿದ್ದು, ಬೆಂಕಿಯ ಜ್ವಾಲೆಯು ಹತ್ತು ಕಿ.ಮೀ ದೂರಕ್ಕೂ ಕಾಣಿಸಿದೆ. ಘಟನೆಯಲ್ಲಿ ಮೂವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಕೂಡಲೇ ಅಗ್ನಿಶಾಮಕ ದಳ ಧಾವಿಸಿ, ಬೆಂಕಿ ನಂದಿಸಿದೆ.

- Advertisement -

Related news

error: Content is protected !!