Saturday, June 28, 2025
spot_imgspot_img
spot_imgspot_img

ಟಾಟಾ ಏಸ್ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು..!

- Advertisement -
- Advertisement -

ಚಿಕ್ಕಮಗಳೂರು: ಗಣೇಶ ವಿಗ್ರಹ ತರಲು ತೆರಳುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಭೈರಾಪುರ ಗೇಟ್ ಬಳಿ ನಡೆದಿದೆ.

ಮೃತಪಟ್ಟ ಯುವಕರನ್ನು ಶ್ರೀಧರ್ (20) ಮತ್ತು ಧನುಷ್ (20) ಎಂದು ಗುರುತಿಸಲಾಗಿದೆ.

ಗಣಪತಿ ತರಲು ಹೋಗಿದ್ದ ವೇಳೆ ಭೈರಾಪುರ ಗೇಟ್ ಬಳಿ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ಪಲ್ಟಿಯಾಗಿದೆ. ಟಾಟಾ ಏಸ್ ಬಿದ್ದ ರಭಸಕ್ಕೆ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಯುವಕರ ತಲೆಗೆ ಗಂಭೀರ ಗಾಯವಾಗಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನಿತರ ಮೂವರು ಯುವಕರಿಗೂ ಗಂಭೀರ ಗಾಯವಾಗಿದ್ದು, ಅವರನ್ನು ತರೀಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ಹಾಗೂ ಗಾಯಾಳುಗಳೆಲ್ಲರು ಲಿಂಗದಹಳ್ಳಿ ನಿವಾಸಿಗಳು ಎಂದು ತಿಳಿದು ಬಂದಿದೆ.
ಘಟನಾ ಸ್ಥಳಕ್ಕೆ ಲಿಂಗದಹಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಲಿಂಗದಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Related news

error: Content is protected !!