Thursday, May 2, 2024
spot_imgspot_img
spot_imgspot_img

ಜೋಕಾಲಿ ತಂದ ಆಪತ್ತು; ಎರಡನೇ ಮಹಡಿಯಿಂದ ಬಿದ್ದು ಶಿಕ್ಷಕಿ ಮೃತ್ಯು..!!

- Advertisement -G L Acharya panikkar
- Advertisement -

ಜೋಕಾಲಿ ಆಡುತ್ತಿದ್ದ ಶಿಕ್ಷಕಿಯೊಬ್ಬರು ಎರಡನೇ ಮಹಡಿಯಿಂದ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ನಡೆದಿದೆ.

ಕೊಳ್ಳೆಗಾಲದ ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ನಿವಾಸಿ ಕೆ. ಪುಟ್ಟಿ (53) ಮೃತ ಶಿಕ್ಷಕಿ. ಇವರು ಯಳಂದೂರು ತಾಲೂಕಿನ ಮಾಂಬಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಜೋಕಾಲಿ ಆಡುತ್ತಿದ್ದ ವೇಳೆ ಶಿಕ್ಷಕಿ ಆಕಸ್ಮಿಕವಾಗಿ 2ನೇ ಮಹಡಿಯಿಂದ ಬಿದ್ದಿದ್ದಾರೆ. ಗಂಭೀರ ಗಾಯಗೊಂಡಿದ್ದ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ 2 ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಘಟನೆ ಕುರಿತು ಕೊಳ್ಳೇಗಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!