Friday, March 29, 2024
spot_imgspot_img
spot_imgspot_img

“ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ ಆತ್ಮಹತ್ಯೆ

- Advertisement -G L Acharya panikkar
- Advertisement -

ಚಿಕ್ಕಬಳ್ಳಾಪುರ: ಶಾಲಾ ಆಡಳಿತ ಮಂಡಳಿಯಿಂದ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕ. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ. ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು.

ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆ ಯಾಚಿಸುತ್ತಿದ್ದೇನೆ“ ಎಂದು ಕೂಡ ಬರೆದಿದ್ದಾರೆ.

- Advertisement -

Related news

error: Content is protected !!