Friday, April 19, 2024
spot_imgspot_img
spot_imgspot_img

ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ‌-ಸಚಿವ ಸುರೇಶ್ ಕುಮಾರ್

- Advertisement -G L Acharya panikkar
- Advertisement -

ಬೆಂಗಳೂರು ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕ ನೇಮಕಾತಿ‌ಗಳನ್ನು ನಡೆಸುವ ಸಲುವಾಗಿ  ನೇಮಕಾತಿ ನಿಯಮಾವಳಿಗಳಲ್ಲಿ ತಿದ್ದುಪಡಿ ಮಾಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.


ವಿಧಾನ ಪರಿಷತ್‌ನಲ್ಲಿ ಈ ಸಂಬಂಧ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ಇರುವ ವಿಚಾರ ಸರ್ಕಾರದ ಗಮನಕ್ಕೆ ಬಂದಿದೆ. ಈ ಸಂಬಂಧ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಎರಡು ಬಾರಿ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಲಾಗಿದೆ. ಆದರೆ ಅಗತ್ಯಕ್ಕೆ ತಕ್ಕಷ್ಟು ಅರ್ಹ ಅಭ್ಯರ್ಥಿಗಳು ಆಯ್ಕೆಯಾಗಲಿಲ್ಲ ಎಂದು ಹೇಳಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಸಂಪೂರ್ಣ ಅಭಿವೃದ್ಧಿ‌ಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಈ ಭಾಗದ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಿ ಪ್ರತ್ಯೇಕ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಸುವ ನಿಟ್ಟಿನಲ್ಲಿಯೂ ಸರ್ಕಾರ ಚಿಂತನೆ ನಡೆಸಿದೆ. ಈ ಸಮಸ್ಯೆ ಪರಿಹರಿಸಲು ಸರ್ಕಾರ ಪೂರಕ ಕ್ರಮ ಕೈಗೊಳ್ಳುವ ಭರವಸೆಯನ್ನೂ ಸುರೇಶ್ ಕುಮಾರ್ ನೀಡಿದ್ದಾರೆ.

- Advertisement -

Related news

error: Content is protected !!