Saturday, June 28, 2025
spot_imgspot_img
spot_imgspot_img

ವಿಚ್ಛೇದನ ಖಚಿತ ಪಡಿಸಿದ ಟೀಂ ಇಂಡಿಯಾ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ

- Advertisement -
- Advertisement -

ಬಾಲಿವುಡ್ ಆಕ್ಟ್ರೇಸ್ ನತಾಶಾ ಸ್ಟಾಂಕೋವಿಕ್ ಮತ್ತು ಟೀಂ ಇಂಡಿಯಾ ಕ್ರಿಕೆಟಿಗ ಹಾರ್ಡಿಕ್ ಪಾಂಡ್ಯ ಅವರಿಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ ವಿಚ್ಛೇದನ ವದಂತಿಗೆ ಅಧಿಕೃತ ತೆರೆಬಿದ್ದಿದೆ. ನಾವಿಬ್ಬರು ಪರಸ್ಪರ ಬೇರೆ ಬೇರೆಯಾಗಿರುವುದಾಗಿ ಸ್ವತಃ ಹಾರ್ದಿಕ್ ಪಾಂಡ್ಯ ಅವರೇ ಖಚಿತಪಡಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿರುವ ಹಾರ್ದಿಕ್ ಪಾಂಡ್ಯ, ಹಲವು ದಿನಗಳಿಂದ ಕೇಳಿಬರುತ್ತಿದ್ದ ಸುದ್ದಿಗೆ ತೆರೆ ಎಳೆದಿದ್ದಾರೆ.

ವಾಸ್ತವವಾಗಿ 2024 ರ ಐಪಿಎಲ್ ಆರಂಭವಾದಾಗಿನಿಂದಲೂ ಈ ಇಬ್ಬರು ದಂಪತಿಗಳು ಎಲ್ಲಿಯೂ ಒಟ್ಟಿಗೆ ಕಾಣಿಸಿಕೊಂಡಿರಲಿಲ್ಲ. ಟಿ20 ವಿಶ್ವಕಪ್ ವೇಳೆಯೂ ನತಾಶಾ ಸುಳಿವಿರಲಿಲ್ಲ. ಇದೆಲ್ಲದರ ಜೊತೆಗೆ ಅನಂತ್ ಅಂಬಾನಿ ಮದುವೆಯಲ್ಲೂ ಹಾರ್ದಿಕ್ ಏಕಾಂಗಿಯಾಗಿ ಕಾಣಿಸಿಕೊಂಡಿದ್ದರು. ಹೀಗಾಗಿ ಈ ಇಬ್ಬರ ವೈಯಕ್ತಿಕ ಬದುಕಿನಲ್ಲಿ ಬಿರುಗಾಳಿ ಎದ್ದಿರುವ ಸುದ್ದಿಗೆ ಪುಷ್ಠಿ ಸಿಕ್ಕಿತ್ತು. ಇದೀಗ ಆ ವದಂತಿಗೆ ಅಂತ್ಯ ಹಾಡುವ ಕೆಲಸವನ್ನು ಹಾರ್ದಿಕ್ ಪಾಂಡ್ಯ ಮಾಡಿದ್ದಾರೆ.

https://www.instagram.com/p/C9kcSrhTp5J/?utm_source=ig_embed&ig_rid=c4c3c3b3-9f5f-43f0-a0bb-b82d977667dc

- Advertisement -

Related news

error: Content is protected !!