Tuesday, July 1, 2025
spot_imgspot_img
spot_imgspot_img

ಟೆಕ್ ಶೃಂಗಸಭೆ- 2020

- Advertisement -
- Advertisement -

ಬೆಂಗಳೂರು: ಮಾಹಿತಿ ತಂತ್ರಜ್ಞಾನಕ್ಕೆ ಉತ್ತೇಜನ ನೀಡುವ ಸಲುವಾಗಿ ಇದೇ ನವೆಂಬರ್ 19ರಿಂದ 21ರವರೆಗೆ 3 ದಿನ ಸಿಲಿಕಾನ್​ ಸಿಟಿಯಲ್ಲಿ ಬೆಂಗಳೂರು ಟೆಕ್ ಶೃಂಗಸಭೆ- 2020 ನಡೆಯಲಿದೆ.

ವರ್ಚುಯಲ್​ ಮೂಲವಾಗಿ ನಡೆಯಲಿರುವ ಈ ಶೃಂಗಸಭೆಯನ್ನು  ಪ್ರಧಾನ ಮಂತ್ರಿ ನರೇಂದ್ರ ಮೋದಿ  ನವೆಂಬರ್ 19ರಂದು ಮಧ್ಯಾಹ್ನ 12 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್‌ವೇರ್ ತಂತ್ರಜ್ಞಾನ ಪಾರ್ಕ್ (ಎಸ್‌ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರವು ಈ ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಒಕ್ಕೂಟದ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಗಣ್ಯರು ಭಾಗವಹಿಸಲಿದ್ದಾರೆ.  ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ನಾವೀನ್ಯಕಾರರು, ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಭಾರತ ಮತ್ತು ಜಗತ್ತಿನ ಶಿಕ್ಷಣ ತಜ್ಞರು ಸಹ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಮುಂದಿನದು ಈಗಲೇ ” ಎಂಬುದು ಈ ವರ್ಷದ ಶೃಂಗಸಭೆಯ ವಿಷಯವಾಗಿದೆ. ಸಭೆಯಲ್ಲಿ ಕೊರೋನಾ ನಂತರದ ಜಗತ್ತಿನ ಪ್ರಮುಖ ಸವಾಲುಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ‘ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್’ ಹಾಗೂ ‘ಜೈವಿಕ ತಂತ್ರಜ್ಞಾನ’ ಕ್ಷೇತ್ರಗಳಲ್ಲಿ ಪ್ರಮುಖ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳ ಪರಿಣಾಮಗಳನ್ನು ಕುರಿತು ಕೂಡ ಸಮಾಲೋಚನೆ ನಡೆಸಲಾಗುತ್ತದೆ.


ಈಗ ನಡೆಯುತ್ತಿರುವುದು ಬೆಂಗಳೂರು ಅಂತರರಾಷ್ಟ್ರೀಯ ತಾಂತ್ರಿಕ ಶೃಂಗಸಭೆಯ 23ನೇ ಆವೃತ್ತಿ.ಅಂತರರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಬೆಂಗಳೂರು ತಾಂತ್ರಿಕ ಶೃಂಗಸಭೆಯಲ್ಲಿ  ವಿಶ್ವದ ಅತ್ಯುತ್ತಮ ತಂತ್ರಜ್ಞರು, ಉದ್ಯಮಿಗಳು ತಮ್ಮ ಹೊಸ ಉತ್ಪನ್ನಗಳನ ಬಗ್ಗೆ ಹಾಗೂ ಭವಿಷ್ಯದ ಅತ್ಯಾಧುನಿಕ ವಿಚಾರಗಳನ್ನು ಪ್ರಸ್ತುತಪಡಿಸುತ್ತಾರೆ.

- Advertisement -

Related news

error: Content is protected !!