Friday, July 24, 2026
spot_imgspot_img
spot_imgspot_img

ಗುಂಡಿ ತಪ್ಪಿಸಲು ಹೋಗಿ ಬೈಕ್‌ನಿಂದ ರಸ್ತೆಗೆ ಬಿದ್ದ ಟೆಕ್ಕಿ; ಲಾರಿ ಹರಿದು ಸಾವು

- Advertisement -
- Advertisement -

ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಟೆಕ್ಕಿಯೊಬ್ಬರು ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿ ಹುಸ್ಕೂರು ಎಪಿಎಂಸಿ ಬಳಿ ನಡೆದಿದೆ.

ಮೃತ ಟೆಕ್ಕಿಯನ್ನು ಪ್ರಿಯಾಂಕ (26) ಎಂದು ಗುರುತಿಸಲಾಗಿದೆ.

ಯುವತಿ ಅಣ್ಣನ ಜೊತೆ ಬೈಕ್‍ನಲ್ಲಿ ಎಪಿಎಂಸಿ ಹುಸ್ಕೂರು ರಸ್ತೆಯಿಂದ ಮಾದಾವರಕ್ಕೆ ತೆರಳುತ್ತಿದ್ದರು. ಈ ವೇಳೆ ಅಪಘಾತ ನಡೆದಿದೆ. ರಸ್ತೆ ಕಾಮಗಾರಿಯಿಂದ ಈ ರಸ್ತೆ ಹದಗೆಟ್ಟಿದ್ದು, ಗುಂಡಿ ತಪ್ಪಿಸಲು ಪ್ರಿಯಾಂಕ ಸಹೋದರ ಯತ್ನಿಸಿದ್ದಾರೆ. ಈ ವೇಳೆ ಮುಂದೆ ಬಂದ ಲಾರಿ ಕೆಳಗೆ ಯುವತಿ ಬಿದ್ದಿದ್ದಾರೆ. ಈ ವೇಳೆ ಲಾರಿ ಯುವತಿಯ ತಲೆ ಮೇಲೆ ಹರಿದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಈ ಬಗ್ಗೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!