Thursday, June 18, 2026
spot_imgspot_img
spot_imgspot_img

ಮೈಕ್ರೋಸಾಫ್ಟ್ ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ದೋಷ; ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ..!

- Advertisement -
- Advertisement -

ನವದೆಹಲಿ: ಮೈಕ್ರೋಸಾಫ್ಟ್ ಸಾಫ್ಟ್‌ವೇರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿರುವ ಹಿನ್ನೆಲೆ ವಿಮಾನ, ಸೂಪರ್‌ಮಾರ್ಕೆಟ್, ಬ್ಯಾಂಕಿಂಗ್, ಸ್ಟಾಕ್ ಎಕ್ಸ್‌ಚೇಂಜ್‌ ಸೇರಿದಂತೆ ಅನೇಕ ವಲಯಗಳ ಸೇವೆಯಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿಯಾಗಿದೆ.

ತಾಂತ್ರಿಕ ದೋಷದಿಂದಾಗಿ ಭಾರತದ ಇಂಡಿಗೋ, ಸ್ಪೈಸ್‌ಜೆಟ್ ಮತ್ತು ಆಕಾಶ ಏರ್ ಬುಕಿಂಗ್, ಚೆಕ್-ಇನ್ ಮತ್ತು ಫ್ಲೈಟ್ ನವೀಕರಣಗಳ ಸೇವೆ ಮೇಲೆ ಪರಿಣಾಮ ಬೀರಿದೆ. ತಾಂತ್ರಿಕ ದೋಷದಿಂದಾಗಿ ದೆಹಲಿ, ಬೆಂಗಳೂರು, ಹೈದರಾಬಾದ್ ವಿಮಾನ ನಿಲ್ದಾಣದಲ್ಲೂ ಸಮಸ್ಯೆ ಎದುರಾಗಿದೆ. ಹೈದರಾಬಾದ್ ಏರ್ಪೋರ್ಟ್‌ನಲ್ಲಿ ಕೈಬರಹದಲ್ಲೇ ಬೋರ್ಡಿಂಗ್ ಪಾಸ್ ವಿತರಿಸಲಾಗುತ್ತಿದೆ.

ಸಮಸ್ಯೆ ಕುರಿತು ಪ್ರತಿಕ್ರಿಯಿಸಿರುವ ಮೈಕ್ರೋಸಾಫ್ಟ್ ಕಂಪನಿ, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದೆ. ಇನ್ನು ತಂತ್ರಿಕ ಸಮಸ್ಯೆಯಿಂದಾಗಿ ಲಂಡನ್ ಸ್ಟಾಕ್ ಎಕ್ಸ್‌ಚೇಂಜ್‌ ಸೇವೆಯಲ್ಲೂ ವ್ಯತ್ಯಯವಾಗಿದೆ. ಸ್ಕೈ ನ್ಯೂಸ್, ಆಸ್ಟ್ರೇಲಿಯಾದ ಎಬಿಸಿ ನ್ಯೂಸ್ ಪ್ರಸಾರ ಹಾಗೂ ಬ್ರಿಟನ್‌ನ ರೈಲು ಸೇವೆ ಸ್ಥಗಿತವಾಗಿದೆ. ಭಾರತದ ಐಟಿ ಇಲಾಖೆಯಿಂದ ಮೈಕ್ರೋಸಾಫ್ಟ್ ಸಂಸ್ಥೆ ಜೊತೆ ಸಂಪರ್ಕ ಸಾಧಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸ್ಪೈಸ್‌ಜೆಟ್ ವಿಮಾನ ಕಾರ್ಯಾಚರಣೆಯ ಅಡೆತಡೆಗಳ ಕುರಿತು ನವೀಕರಣಗಳನ್ನು ಒದಗಿಸುವಲ್ಲಿ ಪ್ರಸ್ತುತ ನಾವು ತಾಂತ್ರಿಕ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಈ ಸಮಸ್ಯೆಯನ್ನು ಪರಿಹರಿಸಲು ನಮ್ಮ ತಂಡವು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಪ್ರಸ್ತುತ ಯಾವುದೇ ಅನಾನುಕೂಲತೆಗಾಗಿ ನಾವು ವಿಷಾದಿಸುತ್ತೇವೆ. ನಿಮ್ಮ ತಾಳ್ಮೆ ಮತ್ತು ಸಹಕಾರಕ್ಕಾಗಿ ಧನ್ಯವಾದಗಳು ಎಂದು ತಿಳಿಸಿದೆ.

ದೆಹಲಿ ವಿಮಾನ ನಿಲ್ದಾಣವು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ನಮ್ಮ ಕೆಲವು ಸೇವೆಗಳ ಮೇಲೆ ಪರಿಣಾಮ ಬೀರಿದೆ. ಜಾಗತಿಕ ಐಟಿ ಸಮಸ್ಯೆಯಿಂದಾಗಿ, ದೆಹಲಿ ವಿಮಾನ ನಿಲ್ದಾಣದಲ್ಲಿನ ಕೆಲವು ಸೇವೆಗಳು ತಾತ್ಕಾಲಿಕವಾಗಿ ಪರಿಣಾಮ ಬೀರಿವೆ. ನಮ್ಮ ಪ್ರಯಾಣಿಕರಿಗೆ ಎದುರಾಗಿರುವ ಅನಾನುಕೂಲತೆಯನ್ನು ಕಡಿಮೆ ಮಾಡಲು ನಾವು ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದು ಹೇಳಿದೆ.

- Advertisement -

Related news

error: Content is protected !!