Saturday, April 27, 2024
spot_imgspot_img
spot_imgspot_img

ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ದಿಢೀರ್‌ ರಾಜೀನಾಮೆ ನೀಡಿದ ತೇಜಸ್ವಿನಿ ಗೌಡ

- Advertisement -G L Acharya panikkar
- Advertisement -

ಲೋಕಸಭೆ ಚುನಾವಣೆ ಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ವಿಧಾನ ಪರಿಷತ್ ಬಿಜೆಪಿ ಸದಸ್ಯೆ ತೇಜಸ್ವಿನಿ ಗೌಡ ದಿಢೀರ್ ಎಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತೇಜಸ್ವಿನಿ ಗೌಡ ಅವರು ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ತಿಳಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್​ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು.ಆದರೂ ಅದಕ್ಕೂ ಮುನ್ನವೇ ರಾಜೀನಾಮೆ ಸಲ್ಲಿಸಿದ್ದಾರೆ.

ವಿಧಾನ ಪರಿಷತ್​ ಸದಸ್ಯೆಯಾಗಿದ್ದ ತೇಜಸ್ವಿನಿ ಗೌಡ ಅವರು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯುವ ಆಸಕ್ತಿಯನ್ನು ಪಕ್ಷದ ನಾಯಕರ ಮುಂದೆ ಇಟ್ಟಿದ್ದರು ಎನ್ನಲಾಗುತ್ತಿದೆ. ಸಂಸದ ಪ್ರತಾಪ್​ ಸಿಂಹ ಅವರಿಗೆ ಟಿಕೆಟ್​ ಕೈ ತಪ್ಪಿದರೆ ತಮಗೆ ಸಿಗುತ್ತದೆ ಎಂಬ ಆಶಯದಲ್ಲಿದ್ದರು.

ಆದರೆ ತೇಜಸ್ವಿನಿ ಗೌಡ ಅವರಿಗೆ ಟಿಕೆಟ್ ಸಿಗಲಿಲ್ಲ. ಬದಲಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಟಿಕೆಟ್​ ಲಭಿಸಿದೆ. ಟಿಕೆಟ್​ ಘೋಷಣೆ ನಂತರ ಬಿಜೆಪಿಯಿಂದ ಅಂತರ ತೇಜಸ್ವಿನಿ ಗೌಡ ಅವರು ಕಾಯ್ದುಕೊಂಡಿದ್ದಾರೆ. ಇದೀಗ ತೇಜಸ್ವಿನಿ ಗೌಡ ಮತ್ತೆ ಕಾಂಗ್ರೆಸ್​, ಘರವಾಪಸಿ ​ಆಗಿಲಿದ್ದಾರೆ ಎಂದು ಹೇಳಲಾಗುತ್ತಿದೆ.

- Advertisement -

Related news

error: Content is protected !!