Wednesday, July 29, 2026
spot_imgspot_img
spot_imgspot_img

*ಕಡೇಶಿವಾಲಯ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ನುಳಿಯಾಲು*

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲೂಕಿನ ಕಡೇಶಿವಾಲಯ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಪುರುಷೋತ್ತಮ ಶೆಟ್ಟಿ ನುಳಿಯಾಲು ಆಯ್ಕೆಯಾಗಿದ್ದಾರೆ. ಮುಂದಿನ 3 ವರ್ಷದ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚನೆ ಮಾಡಲಾಗಿದೆ. ಉದ್ಯಮಿ ಪುರುಷೋತ್ತಮ ಶೆಟ್ಟಿ ಯವರು ಸಾಮಾಜಿಕ, ಧಾರ್ಮಿಕ ಕ್ಷೇತ್ರದಲ್ಲಿ ತಮ್ಮ ಸೇವೆಯನ್ನು ಮಾಡುತ್ತಿದ್ದು, ಕೊಡುಗೈ ದಾನಿಯಾಗಿದ್ದಾರೆ.ಕಡೇಶಿವಾಲಯ ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿದೆ. ದೇವಳದ ಆಡಳಿತಾಧಿಕಾರಿ ಹಾಗೂ ಸಮಿತಿ ಸದಸ್ಯರು ಸಭೆ ಸೇರಿ ಜ.20 ರಂದು ಸಮಿತಿಯ ಸದಸ್ಯರಲ್ಲೊಬ್ಬರಾದ ಪುರುಷೋತ್ತಮ. ಆರ್. ಶೆಟ್ಟಿ ಅವರನ್ನು ಅಧ್ಯಕ್ಷರಾಗಿ ಆಯ್ಕೆಮಾಡಲಾಗಿದೆ.‌ ‌ ಅವರ ಅಧ್ಯಕ್ಷ ಸ್ಥಾನವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆಯಡಿಯಲ್ಲಿ ಅಂಗೀಕರಿಸಲಾಗಿದೆ.

- Advertisement -

Related news

error: Content is protected !!