Sunday, June 29, 2025
spot_imgspot_img
spot_imgspot_img

ಉಡುಪಿ: ಸ್ಕೂಟರ್‌ಗೆ ಟೆಂಪೋ ಡಿಕ್ಕಿ; ಸವಾರ ಮೃತ್ಯು, ಮಹಿಳೆ ಗಾಯ..!

- Advertisement -
- Advertisement -

ಉಡುಪಿ: ಸ್ಕೂಟರ್ ಮತ್ತು ಟೆಂಪೋ ಮಧ್ಯೆ ಅಪಘಾತ ಸಂಭವಿಸಿದ್ದು ಸವಾರರೊಬ್ಬ ಮೃತಪಟ್ಟು, ಸಹ ಸವಾರ ಮಹಿಳೆ ತೀವ್ರವಾಗಿ ಗಾಯಗೊಂಡ ಘಟನೆ ಉಡುಪಿ ಉದ್ಯಾವರ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ಮೃತರನ್ನು ಉಚ್ಚಿಲ ಪೊಲ್ಯ ಮೂಲದ ಪಡುಬಿದ್ರೆ ಕನ್ನಂಗಾರು ನಿವಾಸಿ ಅಝೀಝ್ ಎಂಬವರ ಪುತ್ರ ಮುಫ್ರೀನ್(18) ಹಾಗೂ ಸಹಸವಾರೆಯಾಗಿದ್ದ ಮೃತರ ತಾಯಿ ಹಾಜಿರಾ ಎಂದು ಗುರುತಿಸಲಾಗಿದೆ.

ಕಟಪಾಡಿ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಸ್ಕೂಟರ್ ಗೆ ಟೆಂಪೋ ಡಿಕ್ಕಿ ಹೊಡೆಯಿದಿದೆ ಎನ್ನಲಾಗಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಮುಫ್ರೀನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಸಹಸವಾರೆಯಾಗಿದ್ದ ಮೃತರ ತಾಯಿ ಹಾಜಿರಾ ಎಂಬವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!