Sunday, June 29, 2025
spot_imgspot_img
spot_imgspot_img

ಸರ್ಕಾರಿ ಬಸ್- ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು..!

- Advertisement -
- Advertisement -

ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಘಟನೆಯಲ್ಲಿ ನಾಲ್ವರು ಮೃತಪಟ್ಟ ಘಟನೆ ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಎಂದು ಗುರುತಿಸಲಾಗಿದೆ.

ರುದ್ರಪ್ಪ ಕುಟುಂಬ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿದ್ದರು. ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಗೂ ಇಳಕಲ್‌ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!