Monday, June 8, 2026
spot_imgspot_img
spot_imgspot_img

ಕಾರ್ಕಳ: ಖಾಸಗಿ ಬಸ್ – ಜೀಪ್ ನಡುವೆ ಭೀಕರ ಅಪಘಾತ ; ಹಲವರು ಗಂಭೀರ

- Advertisement -
- Advertisement -

ಕಾರ್ಕಳ: ಖಾಸಗಿ ಬಸ್ ಹಾಗೂ ಜೀಪು ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದ ಘಟನೆ ರಾಜ್ಯ ಹೆದ್ದಾರಿಯಲ್ಲಿನ ನಿಟ್ಟೆ ಮಂಜಲ್ಪಾಕೆ ಎಂಬಲ್ಲಿ ನಡೆದಿದೆ.

ಮೂಡುಬಿದಿರೆಯಿಂದ ಕಾರ್ಕಳವಾಗಿ ಪಡುಬಿದ್ರಿ ಮಾರ್ಗವಾಗಿ ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೆಳ್ಮಣ್ ಕಡೆಯಿಂದ ಕಾರ್ಕಳ ಕಡೆಗೆ ಬರುತ್ತಿದ್ದ ಮಹೇಂದ್ರ ಜೀಪು ಡಿಕ್ಕಿ ಹೊಡೆದಿದೆ.

ಬಸ್ ಹಾಗೂ ಜೀಪಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದ ಘಟನಾ ಸ್ಥಳಕ್ಕೆ ಆಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಕಾರ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಪೈಕಿ12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!