Saturday, June 6, 2026
spot_imgspot_img
spot_imgspot_img

ಲಾರಿಗಳ ನಡುವೆ ಭೀಕರ ಅಪಘಾತ; ಚಾಲಕ ಮೃತ್ಯು..!

- Advertisement -
- Advertisement -

ಬೀದರ್: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬಂದು ಮತ್ತೊಂದು ಲಾರಿ ಡಿಕ್ಕಿಯಾಗಿ ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬೀದರ್ ಗಡಿಯ ತೆಲಂಗಾಣದ ಜಹೀರಾಬಾದ್ ಬಳಿ ನಡೆದಿದೆ.

ಮೃತಪಟ್ಟ ಲಾರಿ ಚಾಲಕ ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಲಾರಿ ಚಾಲಕ ಏಜಾಜ್ ಶೇಕ್ ಕಲಿಮೋದ್ದಿನ್(37) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹೈದರಾಬಾದ್‌ನಿಂದ ಬೀದರ್‌ನ ಕಮಲನಗರದ ಕಡೆ ಬರುತ್ತಿದ್ದಾಗ ಲಾರಿ ಪಂಕ್ಚರ್ ಆಗಿ ರಸ್ತೆಯಲ್ಲಿ ನಿಂತಿತ್ತು. ಈ ವೇಳೆ ನಿಂತಿದ್ದ ಲಾರಿಗೆ ಹಿಂಬದಿಯಿಂದ ಮತ್ತೊಂದು ಲಾರಿ ಬಂದು ಗುದ್ದಿದ್ದು, ಲಾರಿ ಚಾಲಕ ಸ್ಥಳದಲ್ಲೇ ಮೃತಪಟ್ಟದ್ದಾರೆ.

- Advertisement -

Related news

error: Content is protected !!