- Advertisement -
- Advertisement -





ವಿಜಯಪುರ: ಟಿಯುವಿ ಕಾರು, ಕಂಟೇನರ್ ಹಾಗೂ ಖಾಸಗಿ ಬಸ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಪಟ್ಟಣದ ಬಳಿ ಎನ್‌ಹೆಚ್ 50ರಲ್ಲಿ ನಡೆದಿದೆ.
ಭೀಕರ ಅಪಘಾತದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಹಾಗೂ ಖಾಸಗಿ ಬಸ್‌ನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಇತರರಿಗೆ ಗಾಯಗಳಾಗಿವೆ. ಅಲ್ಲದೇ ಕಂಟೇನರ್ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿದೆ.
ಘಟನಾ ಸ್ಥಳಕ್ಕೆ ಮನಗೂಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದಾರೆ.
- Advertisement -








