Friday, June 5, 2026
spot_imgspot_img
spot_imgspot_img

ಅಮೇರಿಕಾದಲ್ಲಿ ಭೀಕರ ಅಪಘಾತ – 4 ಭಾರತೀಯರು ಮೃತ್ಯು..!

- Advertisement -
- Advertisement -

ನವದೆಹಲಿ: ಟೆಕ್ಸಾಸ್‌ನಲ್ಲಿ ಐದು ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ಶುಕ್ರವಾರ ಅರ್ಕಾನ್ಸಾಸ್‌ನ ಬೆಂಟೊನ್‌ವಿಲ್ಲೆಗೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ.

ಮೃತಪಟ್ಟವರನ್ನು ಆರ್ಯನ್ ರಘುನಾಥ್ ಓರಂಪಾಟಿ, ಫಾರೂಕ್ ಶೇಕ್, ಲೋಕೇಶ್ ಪಾಲಾಚಾರ್ಲ ಮತ್ತು ದರ್ಶಿನಿ ವಾಸುದೇವನ್ ಎಂದು ಗುರುತಿಸಲಾಗಿದೆ.

ವೇಗವಾಗಿ ಬಂದ ಟ್ರಕ್ ಹಿಂಬದಿಯಿಂದ ಭಾರತೀಯರಿದ್ದ ಎಸ್‌ಯುವಿ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಇದರಿಂದ ದೇಹಗಳು ಸುಟ್ಟುಹೋಗಿವೆ. ಅವರ ಗುರುತನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಡಿಎನ್ಎ ಪರೀಕ್ಷೆ ಮಾಡಿದ್ದಾರೆ.

ಓರಂಪತಿ ಮತ್ತು ಅವರ ಸ್ನೇಹಿತ ಶೇಕ್ ಡಲ್ಲಾಸ್‌ನಲ್ಲಿರುವ ತನ್ನ ಸೋದರಸಂಬಂಧಿಯನ್ನು ಭೇಟಿ ಮಾಡಿ ಹಿಂತಿರುಗುತ್ತಿದ್ದರು. ಲೋಕೇಶ್ ಪಾಲಾಚಾರ್ಲ ಅವರು ಪತ್ನಿಯನ್ನು ಭೇಟಿಯಾಗಲು ಬೆಂಟನ್‌ವಿಲ್ಲೆಗೆ ತೆರಳುತ್ತಿದ್ದರು. ಮತ್ತು ಟೆಕ್ಸಾಸ್ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆದಿರುವ ದರ್ಶಿನಿ ವಾಸುದೇವನ್ ಅವರು ಬೆಂಟನ್‌ವಿಲ್ಲೆಯಲ್ಲಿರುವ ತನ್ನ ಚಿಕ್ಕಪ್ಪನನ್ನು ಭೇಟಿ ಮಾಡಲು ಹೋಗುತ್ತಿದ್ದರು ಈ ವೇಳೆ ಸಂಭವಿಸಿದ ಅಪಘಾತಕ್ಕೆ ಓರ್ವ ಮಹಿಳೆ ಸೇರಿದಂತೆ ನಾಲ್ವರು ಭಾರತೀಯರು ಬಲಿಯಾಗಿದ್ದಾರೆ.

- Advertisement -

Related news

error: Content is protected !!