Sunday, June 21, 2026
spot_imgspot_img
spot_imgspot_img

ತೊಕ್ಕೊಟ್ಟು: ಭೀಕರ ಅಪಘಾತ : ಪತ್ನಿ ಮೃತ್ಯು, ಪತಿ ಗಂಭೀರ

- Advertisement -
- Advertisement -

ತೊಕ್ಕೊಟ್ಟು: ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸಹಸವಾರೆ ಸ್ಥಳದಲ್ಲೇ ಮೃತಪಟ್ಟ ಘಟನೆ ತೊಕ್ಕೊಟ್ಟು ಬಳಿ ಶನಿವಾರ ಸಂಜೆಯ ವೇಳೆ ನಡೆದಿದೆ.

ಮೃತ ಮಹಿಳೆಯನ್ನು ಕುಳಾಯಿ ಮೂಲದ ರಹ್ಮತ್ ಎಂದು ಗುರುತಿಸಲಾಗಿದೆ.

ದೇರಳಕಟ್ಟೆ ಕಡೆಯಿಂದ ಸ್ಕೂಟರ್ ನಲ್ಲಿ ತೊಕ್ಕೊಟ್ಟು ಕಡೆಗೆ ದಂಪತಿ ಬರುತ್ತಿದ್ದ ವೇಳೆಯಲ್ಲಿ ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಹಂತದಲ್ಲಿ ಟ್ಯಾಂಕರ್ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಪ್ರಸ್ತುತ ಅವರು ದೇರಳಕಟ್ಟೆ, ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಪತಿ ರಶೀದ್ ಜೊತೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರ ಗಾಯಗೊಂಡ ಸವಾರ ರಶೀದ್ ಅವರನ್ನು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!