Saturday, May 4, 2024
spot_imgspot_img
spot_imgspot_img

ನೇಪಾಳದಲ್ಲಿ ಭೀಕರ ಭೂಕಂಪ, 132 ಕ್ಕೂ ಅಧಿಕ ಮಂದಿ ಸಾವು….!

- Advertisement -G L Acharya panikkar
- Advertisement -

ಭಾರಿ ಪ್ರಮಾಣದ ಭೂಕಂಪನ ಉಂಟಾಗಿದ್ದು, ನೂರಾರು ಮಂದಿ ಗಾಯಗೊಂಡಿದ್ದು, ಸಾವಿರಾರು ಮನೆ ಮಠ ಕಳೆದುಕೊಂಡ ಘಟನೆ ನೇಪಾಳದಲ್ಲಿ ನಡೆದಿದೆ.

ವರದಿಗಳ ಪ್ರಕಾರ 132 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ರಿಕ್ಟರ್ ಮಾಪಕದಲ್ಲಿ 6.4ರಷ್ಟು ತೀವ್ರತೆ ಹೊಂದಿದೆ.

ಭೂಕಂಪಪೀಡಿತ ಪ್ರದೇಶಗಳಲ್ಲಿ ಮನೆಗಳು ಕುಸಿದು ಬಿದ್ದಿದ್ದು ಜನ ಬೀದಿಗೆ ಬಿದ್ದಿದ್ದಾರೆ. ರಕ್ಷಣಾ ಕಾರ್ಯಗಳು ಆರಂಭವಾಗಿದ್ದು ಕೆಲವೆಡೆ ಇನ್ನೂ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲವೆಂದು ಸ್ಥಳೀಯ ಅಧಿಕಾರಿ ಹರೀಶ್ ಚಂದ್ರ ಶರ್ಮಾ ಮಾಹಿತಿ ನೀಡಿದ್ದಾರೆ. ಭೀಕರ ದುರಂತದ ಹಿನ್ನೆಲೆಯಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಸರ್ಕಾರ ಪ್ರಕಟಿಸಿದೆ

ಭೂಕಂಪದ ಕೇಂದ್ರ ಬಿಂದುವಿನಿಂದ ಸುಮಾರು 800 ಕಿಲೋಮೀಟರ್ ದೂರದಲ್ಲಿರುವ ಭಾರತದ ರಾಜಧಾನಿ ಹೊಸದಿಲ್ಲಿ ಪ್ರದೇಶದಲ್ಲಿ ಕೂಡಾ ಭೂಕಂಪದ ಅನುಭವ ಆಗಿದೆ. ಬಹುತೇಕ ಮಂದಿ ನಿದ್ದೆಯಲ್ಲಿ ಇದ್ದ ಸಂದರ್ಭದಲ್ಲಿ ಇದು ಸಂಭವಿಸಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಮಧ್ಯರಾತ್ರಿ ಈ ದುರಂತ ಸಂಭವಿಸಿದ್ದು, ಪರ್ವತಶ್ರೇಣಿಗಳಿಂದ ಕೂಡಿದ ಗ್ರಾಮದಲ್ಲಿ ಪರಿಹಾರ ಕಾರ್ಯಾಚರಣೆ ಸಮರೋಪಾದಿಯಲ್ಲಿ ಸಾಗಿದೆ. 128 ಮಂದಿ ಈಗಾಗಲೇ ಮೃತಪಟ್ಟಿದ್ದು, ಹಲವು ಪ್ರದೇಶಗಳ ಜತೆ ಸಂಪರ್ಕ ವ್ಯವಸ್ಥೆ ಕಡಿದು ಹೋಗಿದೆ.

- Advertisement -

Related news

error: Content is protected !!