Saturday, June 28, 2025
spot_imgspot_img
spot_imgspot_img

ಕೊಡಗಿನಲ್ಲಿ ವಿದ್ಯಾರ್ಥಿನಿಯ ರುಂಡ ಕತ್ತರಿಸಿ ಭೀಕರ ಕೊಲೆ: ಕೊನೆಗೂ ರುಂಡ ಪತ್ತೆ

- Advertisement -
- Advertisement -
This image has an empty alt attribute; its file name is VC_PUC_-1-819x1024.jpg

ಎಸ್ಎಸ್ಎಲ್‌ಸಿಯಲ್ಲಿ ಪಾಸಾದ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲೂಕಿನ ಸೂರ್ಲಬ್ಬಿ ಸರ್ಕಾರಿ ‌ಪ್ರೌಢಶಾಲೆಯ ಏಕೈಕ ವಿದ್ಯಾರ್ಥಿನಿ ಮೀನಾ (16) ತಲೆ ಕಡಿದು ಹತ್ಯೆ ಮಾಡಿ ತಲೆಮರೆಸಿಕೊಂಡಿದ್ದ ಮೊಣ್ಣಂಡ ಪ್ರಕಾಶ್ ಯಾನೆ ಪಾಪು (34) ಆರೋಪಿಯನ್ನು ಪೊಲೀಸರು ಇಂದು ಬೆಳಗ್ಗೆ ಬಂಧಿಸಿದ್ದರು. ಇದೀಗ ಮೃತ ಬಾಲಕಿಯ ರುಂಡವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಹತ್ಯೆ ನಡೆದ ಸ್ವಲ್ಪ ದೂರದಲ್ಲೇ ಬಾಲಕಿಯ ತಲೆ ಪತ್ತೆಯಾಗಿದೆ. ಬಾಲಕಿಯನ್ನು ಹತ್ಯೆ ಮಾಡಿದ ಬಳಿಕ ತಲೆಯನ್ನು ಆರೋಪಿ ಪ್ರಕಾಶ್ ಮರದ ಮೇಲಿರಿಸಿದ್ದ. ಇದೀಗ ಪೊಲೀಸರು ಬಾಲಕಿಯ ತಲೆ ಹಾಗೂ ಆಕೆಯ ಚಪ್ಪಲಿಯನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಪ್ಲಾಸ್ಟಿಕ್ ಚೀಲದ ಬ್ಯಾಗಿಗೆ ಅಪ್ರಾಪ್ತೆಯ ತಲೆಯನ್ನು ಹಾಕಿಕೊಂಡಿದ್ದು, ಆರೋಪಿಯನ್ನು ಸ್ಥಳ ಮಹಜರ್ ಗೆ ಪೊಲೀಸರು ಕರೆದೊಯ್ದಿದ್ದಾರೆ. ನಿನ್ನೆ ಇಡೀ ದಿನ ಹುಡುಕಾಡಿದ್ದರೂ ಬಾಲಕಿ ಮೀನಾ ತಲೆ ಪತ್ತೆಯಾಗಿರಲಿಲ್ಲ. ನಿನ್ನೆ ಹುಡುಕಾಡಿದ್ದ ಸ್ಥಳದಲ್ಲೇ ಮರದ ಮೇಲೆ ಆರೋಪಿ ತಲೆ ಇರಿಸಿದ್ದ.

ಮನೆ ಬಳಿ ಮಹಜರು ಬಳಿಕ ಮರಣೋತ್ತರ ಪರೀಕ್ಷೆಗೆ ಪೊಲೀಸರು ತಲೆಯನ್ನು ಕೊಡಗು ಜಿಲ್ಲಾಸ್ಪತ್ರೆಗೆ ಕೊಂಡೊಯ್ಯಲಿದ್ದಾರೆ. ಬಾಲಕಿಯ ಮುಂಡಕ್ಕೆ ರುಂಡ ಹೊಂದಾಣಿಕೆ ಆಗುತ್ತಾ ಎಂದು ಪರಿಶೀಲನೆ ನಡೆಸಿ,ಹೊಂದಾಣಿಕೆ ಆದಲ್ಲಿ ಬಳಿಕ ಶವ ಪರೀಕ್ಷೆ ನಡೆಯಲಿದೆ.

- Advertisement -

Related news

error: Content is protected !!