Friday, May 3, 2024
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ – ಐವರು ಸ್ಥಳದಲ್ಲೇ ಸಾವು

- Advertisement -G L Acharya panikkar
- Advertisement -

ಬೈಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ.

ಘಟನೆಯಲ್ಲಿ ನೇಪಾಳ ಮೂಲದ ಇಬ್ಬರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಇಬ್ಬರು ಮಕ್ಕಳು ಸೇರಿದಂತೆ ಐವರು ತೆರಳುತ್ತಿದ್ದರು. ಈ ವೇಳೆ ದುದುನಿಯಿಂದ ಅಫಜಲಪುರ ಕಡೆಗೆ ಬರುತ್ತಿದ್ದ ಲಾರಿ ಬೈಕಿಗೆ ಡಿಕ್ಕಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಮೃತರು ಅಫಜಲಪುರದಲ್ಲಿ ಫಾಸ್ಟ್‌ಫುಡ್ ಹೋಟೆಲ್ ನಡೆಸುತ್ತಿದ್ದರು. ನೇಪಾಳ ಮೂಲದ ಈ ಕುಟುಂಬ ಕಳೆದ ಹಲವು ವರ್ಷಗಳಿಂದ ಅಫಜಲಪುರದಲ್ಲಿ ವಾಸವಿತ್ತು. ಘಟನಾ ಸ್ಥಳಕ್ಕೆ ಅಫಜಲಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!