Thursday, July 23, 2026
spot_imgspot_img
spot_imgspot_img

ಭೀಕರ ರಸ್ತೆ ಅಪಘಾತ – 6 ತಿಂಗಳ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

- Advertisement -
- Advertisement -

ಚಿಕ್ಕೋಡಿ: ರಿಕ್ಷಾ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ರೈಲು ನಿಲ್ದಾಣದ ಬಳಿ ನಡೆದಿದೆ.

ಮೃತರನ್ನು ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದ ನಿವಾಸಿಗಳಾದ ಬೈಕ್ ಸವಾರ ಮಹಾಂತೇಶ್ ಮಾನೆ, ಅವರ ಪತ್ನಿ ಸಾಕ್ಷಿ ಮಾನೆ ಹಾಗೂ 6 ತಿಂಗಳ ಮಗು ಎಂದು ಗುರುತಿಸಲಾಗಿದೆ.

ಪತಿ, ಪತ್ನಿ ಹಾಗೂ ಮಗು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಈ ಸಂಬಂಧ ರಾಯಬಾಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!