Tuesday, July 23, 2024
spot_imgspot_img
spot_imgspot_img

 *ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ*

- Advertisement -G L Acharya panikkar
- Advertisement -

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಪಟಳ ಮುಂದುವರಿಸಿದ ಉಗ್ರರನ್ನು ಭಾರತೀಯ ಸೇನೆ ಹೆಡೆಮುರಿ ಕಟ್ಟಿದೆ. ಶೋಫಿಯಾನ ಜಿಲ್ಲೆಯಲ್ಲಿ ಕಾರ್ಯಾಚರಣೆ ಮುಂದುವರಿಸಿದ ಸೈನಿಕರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ.

ಇಂದು ಮುಂಜಾನೆ ಸುಮಾರು 3 ಗಂಟೆ ಸುಮಾರಿಗೆ ಅಮ್ಶಿಪೊರ ಭಾಗದಲ್ಲಿ  ಉಗ್ರರು ಅವಿತು ಕುಳಿತಿರುವ ಬಗ್ಗೆ ಸೇನೆಗೆ ಮಾಹಿತಿ ಸಿಕ್ಕಿತ್ತು. ಈ ಹಿನ್ನಲೆಯಲ್ಲಿ ಕಾರ್ಯಾಚರಣೆ ನಡೆಸಿದಾಗ ಉಗ್ರರು ಸೈನಿಕರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಪ್ರತಿದಾಳಿ ನಡೆಸಿದ ಭಾರತೀಯ ಯೋಧರು ಮೂವರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಇನ್ನು ಇವರ ಬಳಿಯಿದ್ದ ಶಸ್ತ್ರಾಸ್ತ್ರಹಾಗೂ ದಾಖಲೆಗಳನ್ನು ಸೇನಾ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಮಾಹಿತಿ ಲಭಿಸಿದೆ.

- Advertisement -

Related news

error: Content is protected !!