Friday, March 21, 2025
spot_imgspot_img
spot_imgspot_img

ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭ

- Advertisement -
- Advertisement -

ಬೆಂಗಳೂರು: ನಾಳೆಯಿಂದ 15ನೇ ಆವೃತ್ತಿಯ ಏರೋ ಇಂಡಿಯಾ ಶೋ ಆರಂಭವಾಗಲಿದೆ. ಏಷ್ಯಾದ ಅತಿದೊಡ್ಡ ಏರೋ ಇಂಡಿಯಾ ಶೋ ಕಾರ್ಯಕ್ರಮವು ಯಲಹಂಕದ ವಾಯು ನೆಲೆಯಲ್ಲಿ ಜರುಗಲಿದೆ.

ರನ್ ಟು ಎ ಬಿಲಿಯನ್ ಆಪರ್ಚುನಿಟೀಸ್ ಎಂಬ ವಿಶಾಲ ಧ್ಯೇಯದೊಂದಿಗೆ 5 ದಿನಗಳ ಕಾಲ ಏರೋ ಇಂಡಿಯಾ ಶೋ ನಡೆಯಲಿದ್ದು, ಈ ಕಾರ್ಯಕ್ರಮಕ್ಕೆ ಯಲಹಂಕ ವಾಯುನೆಲೆ ಸಿದ್ಧವಾಗಿದೆ. ಫೆಬ್ರವರಿ 10 ರಿಂದ 14ರವರೆಗೆ ಏರ್ ಶೋ ನಡೆಯಲಿದ್ದು, ಕಾರ್ಯಕ್ರಮಕ್ಕೆ ದೇಶ, ವಿದೇಶದ ಗಣ್ಯರು ಆಗಮಿಸಲಿದ್ದಾರೆ. ಜೊತೆಗೆ ದೇಶ, ವಿದೇಶದ ವಾಯುಪಡೆಯ ವಿಮಾನಗಳು ಜನರ ಗಮನ ತನ್ನತ್ತ ಸೆಳೆಯಲು ತಯಾರಾಗಿದೆ.

ಕಾರ್ಯಕ್ರಮವನ್ನು ಭಾರತೀಯ ರಕ್ಷಣಾ ಇಲಾಖೆಯ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಮೊದಲ 3 ದಿನ ಅಂದರೆ ಫೆಬ್ರವರಿ 10, 11, 12ರವರೆಗೆ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದ ವ್ಯವಹಾರ ದಿನಗಳಾಗಿರುತ್ತವೆ. 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶವನ್ನ ಕಲ್ಪಿಸಲಾಗಿದೆ. ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ, ವಸ್ತು ಪ್ರದರ್ಶನ ನಡೆಯಲಿದೆ.

- Advertisement -

Related news

error: Content is protected !!