Friday, May 3, 2024
spot_imgspot_img
spot_imgspot_img

ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ನದಿಗೆ ಹಾರಿ ಆರೋಪಿ ಎಸ್ಕೇಪ್..!!

- Advertisement -G L Acharya panikkar
- Advertisement -

ಡ್ರಗ್ಸ್‌ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ಆರೋಪಿಯನ್ನು ಪೊಲೀಸರು ಬಂಧಿಸಲು ಹೋದಾಗ ತಪ್ಪಿಸಿಕೊಳ್ಳಲು ನದಿ ಹಾರಿದ ಪ್ರಕರಣವೊಂದು ಮಧ್ಯಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಮಧ್ಯಪ್ರದೇಶದ ಶಿಯೋಪುರ್ ಪ್ರದೇಶದಲ್ಲಿ ಭಾನುವಾರ ಸಂಜೆ ನಡೆದಿದೆ. ಆರೋಪಿಯನ್ನು ಖಾನ್ ಎಂದು ಗುರುತಿಸಲಾಗಿದೆ. ಖಾನ್ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಎಂಬ ಆರೋಪ ಮೇಲೆ ಪೊಲೀಸರು ಆತನನ್ನು ಬಂಧಿಸಲು ತೆರಳಿದ್ದಾರೆ. ಈ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಖಾನ್ ನೇರವಾಗಿ ನದಿಗೆ ಜಿಗಿದಿದ್ದಾನೆ. ಅಲ್ಲದೆ ಬೇರೆ ಕಡೆ ಈಜುತ್ತಾ ತೆರಳಿದ್ದಾನೆ. ಈ ಮೂಲಕ ಅಧಿಕಾರಿಗಳ ಕೈಯಿಂದ ತಪ್ಪಿಸಿಕೊಂಡಿದ್ದಾನೆ.

ನದಿಯ ಮಧ್ಯೆ ನಿಂತು ಪೊಲೀಸರ ಜೊತೆ ಸಂವಾದ ನಡೆಸುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

- Advertisement -

Related news

error: Content is protected !!