- Advertisement -
- Advertisement -




ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನಲ್ಲಿ ಬಾಲಕಿಯನ್ನು ಕೊಂದು ಆಕೆಯ ರುಂಡದೊಂದಿಗೆ ಪರಾರಿಯಾಗಿದ್ದ ಆರೋಪಿ ಮೊನ್ನಂಡ ಪ್ರಕಾಶ್ (33) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಸುದ್ದಿಯಾಗಿತ್ತು. ಸ್ಥಳೀಯ ಮೂಲಗಳೂ ಆರೋಪಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆಂದು ತಿಳಿಸಿತ್ತು. ಆದರೆ ಈ ಸುದ್ದಿ ಖಚಿತಗೊಂಡಿಲ್ಲ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ತಿಳಿಸಿದ್ದಾರೆ.
ಈತನಿಗಾಗಿ ಹಗಲು ರಾತ್ರಿ ನಿರಂತರವಾಗಿ ಶೋಧ ಕಾರ್ಯ ನಡೆಸುತ್ತಿದ್ದೆವು. ಈ ವೇಳೆ ಬೆಳಿಗ್ಗೆ ಗ್ರಾಮದ ಸಮೀಪ ಕಾಡಿನಲ್ಲಿ ಈತ ಅವಿತುಕೊಂಡಿರುವ ಕುರಿತ ಮಾಹಿತಿ ಲಭಿಸಿತು. ಕೂಡಲೇ ಇಂದು ಬೆಳಿಗ್ಗೆ ಆತನನ್ನು ಬಂಧಿಸಲಾಯಿತು.
ಇನ್ನು ಬಾಲಕಿಯ ರುಂಡದ ಕುರಿತು ಇನ್ನಷ್ಟೇ ತನಿಖೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಂದು ಪ್ರಕಾಶನನ್ನು ಬಂಧಿಸಿರುವ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ದೃಢಪಡಿಸಿದ್ದು
ಊಹಾಪೋಹಗಳಿಗೆ ತೆರೆಬಿದ್ದಿದೆ.
- Advertisement -








