Monday, April 29, 2024
spot_imgspot_img
spot_imgspot_img

ಬಂಟ್ವಾಳ: ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಪೊಲೀಸರ ವಶಕ್ಕೆ

- Advertisement -G L Acharya panikkar
- Advertisement -

ಬಂಟ್ವಾಳ : ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಇನ್ನು ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

- Advertisement -

Related news

error: Content is protected !!